ಬಳ್ಳಾರಿ, 13 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಬಳ್ಳಾರಿ ನಗರ ಉಪವಿಭಾಗ-1 ಜೆಸ್ಕಾಂ ವ್ಯಾಪ್ತಿಯಲ್ಲಿ ಕಂಪನಿಯ ನಿಯಮಾನುಸಾರ ಎಲ್ಲಾ ಸ್ಥಾವರದಲ್ಲಿರುವ ಮೀಟರ್‍ಗಳನ್ನು ಆಪ್ಟಿಕಲ್ ಪ್ರೋಬ್ ಡಿವೈಸ್ ಮೂಲಕವೇ ರೀಡಿಂಗ್ ಮಾಡಬೇಕಾಗಿದ್ದು, ವಿದ್ಯುತ್ ಗ್ರಾಹಕರು ತಮ್ಮ ಸ್ಥಾವರದ ವಿದ್ಯುತ್ ಮಾಪಕವನ್ನು ಕಡ್ಡಾಯವಾಗಿ ನೆಲದಿಂದ 5 ಅಡಿ ಎತ್ತರದಲ್ಲಿ ಅಳವಡಿಸಿಕೊಳ್ಳಬೇಕು.
ವಿದ್ಯುತ್ ಮಾಪಕಗಳು ಗೋಚರಿಸುವ ಹಾಗೂ ಓದಲು ಅನುಕೂಲವಾಗುವ ಸ್ಥಳದಲ್ಲಿ ಇರಬೇಕು. ಮೀಟರ್ ಓದುವವರಿಗೆ ಸ್ಥಳವಿಲ್ಲದಿದ್ದಲ್ಲಿ ಸ್ಥಳ ಒದಗಿಸುವ ಹಾಗೆ ಅ.25 ರೊಳಗಾಗಿ ಅಳವಡಿಸಿಕೊಳ್ಳಬೇಕು.
ಈ ನಿಯಮ ಪಾಲನೆ ಮಾಡದಿದ್ದಲ್ಲಿ ಯಾವುದೇ ಮುನ್ಸೂಚನೆ ಇಲ್ಲದೆ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗುವುದು ಎಂದು ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-1 ರ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್