ಬೆಂಗಳೂರು, 13 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಆರೋಗ್ಯ ಸುಧಾರಣೆಯಾಗಿದ್ದು, ಮಣಿಪಾಲ್ ಆಸ್ಪತ್ರೆಯಿಂದ ಅವರು ಬಿಡುಗಡೆಯಾಗಿ, ಮನೆಗೆ ಮರಳಿದ್ದಾರೆ.
ಜ್ವರ ಮತ್ತು ಮೂತ್ರದ ಸೋಂಕಿನ ಸಮಸ್ಯೆಯಿಂದ ಅವರು ಕಳೆದ ಒಂದು ವಾರದಿಂದ ಚಿಕಿತ್ಸೆ ಪಡೆಯುತ್ತಿದ್ದರು. ಪದ್ಮನಾಭನಗರದ ನಿವಾಸಕ್ಕೆ ಬಂದ ಅವರು ವೈದ್ಯರ ಸೂಚನೆ ಅನುಸಾರ ವಿಶ್ರಾಂತಿ ಪಡೆಯುತ್ತಿದ್ದಾರೆ.
ಪ್ರತಿಪಕ್ಷದ ನಾಯಕ ಆರ್. ಅಶೋಕ್, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸೇರಿದಂತೆ ಹಲವು ನಾಯಕರು ದೇವೇಗೌಡರ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa