ಉದ್ಯೋಗ ನೇಮಕಾತಿಗಾಗಿ ಪ್ರತಿಭಟನೆ : ಸರ್ಕಾರಕ್ಕೆ ಮನವಿ
ಬಳ್ಳಾರಿ, 13 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಕರ್ನಾಟಕದಲ್ಲಿ ಖಾಲಿ ಇರುವ 2,84,881 ಲಕ್ಷಕ್ಕೂ ಹೆಚ್ಚಿನ ಹುದ್ದೆಗಳನ್ನು ಶೀಘ್ರದಲ್ಲೇ ನೇಮಕಾತಿ ನಡೆಸಿ ಪ್ರತಿಯೊಬ್ಬರಿಗೂ ಕನಿಷ್ಠ 5 ವರ್ಷ ವಯೋಮಿತಿ ಸಡಿಲಿಕೆ ಮಾಡಲು ಆಗ್ರಹಿಸಿ ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿ ನಗರದಲ್ಲಿ ಸೋಮವಾರ ಪ್ರತಿಭಟನೆ
ಉದ್ಯೋಗ ನೇಮಕಾತಿಗಾಗಿ ಪ್ರತಿಭಟನೆ : ಸರ್ಕಾರಕ್ಕೆ ಮನವಿ


ಉದ್ಯೋಗ ನೇಮಕಾತಿಗಾಗಿ ಪ್ರತಿಭಟನೆ : ಸರ್ಕಾರಕ್ಕೆ ಮನವಿ


ಬಳ್ಳಾರಿ, 13 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಕರ್ನಾಟಕದಲ್ಲಿ ಖಾಲಿ ಇರುವ 2,84,881 ಲಕ್ಷಕ್ಕೂ ಹೆಚ್ಚಿನ ಹುದ್ದೆಗಳನ್ನು ಶೀಘ್ರದಲ್ಲೇ ನೇಮಕಾತಿ ನಡೆಸಿ ಪ್ರತಿಯೊಬ್ಬರಿಗೂ ಕನಿಷ್ಠ 5 ವರ್ಷ ವಯೋಮಿತಿ ಸಡಿಲಿಕೆ ಮಾಡಲು ಆಗ್ರಹಿಸಿ ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿ ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿ, ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದೆ.

ಪ್ರತಿಭಟನೆಯ ನೇತೃತ್ವವಹಿಸಿ ಮಾತನಾಡಿದ ಎಐಡಿವೈಓ ರಾಜ್ಯಾಧ್ಯಕ್ಷ ಶರಣಪ್ಪ ಉದ್ಭಾಳ್, ಬಿಜೆಪಿ ಸರ್ಕಾರ ಖಾಲಿ ಹುದ್ದೆಗಳ ನೇಮಕಾತಿಗೆ ಕೋವಿಡ್-19ರ ಕಾರಣ ನೀಡಿತ್ತು. ಬಿಜೆಪಿ ಪಕ್ಷದ ಆಡಳಿತಾತ್ಮಕ ವೈಫಲ್ಯಗಳನ್ನು ತೋರಿಸುತ್ತಲೇ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದಲೂ ಉದ್ಯೋಗ ನೇಮಕಾತಿ ಪ್ರಕ್ರಿಯೆಗಳು ಮೀಸಲಾತಿ – ಒಳ ಮೀಸಲಾತಿ ವಿವಾದದಲ್ಲಿಯೇ ಮರೆಯಾಗುತ್ತಿವೆ ಎಂದು ಆರೋಪಿಸಿದರು.

ರಾಜ್ಯ ಸರ್ಕಾರದ ಇಲಾಖೆಗಳಲ್ಲಿ ಖಾಲಿ ಇರುವ ಎಲ್ಲಾ ಹುದ್ದೆಗಳನ್ನು ಶೀಘ್ರದಲ್ಲಿ ಭರ್ತಿಮಾಡಲುಕ್ರಮ ಕೈಗೊಳ್ಳಿ. ಉದ್ಯೋಗ ನೇಮಕಾತಿಗಳಲ್ಲಿ ಅಕ್ರಮಗಳನ್ನು ತಡೆಗಟ್ಟಿ, ಪಾರದರ್ಶಕತೆಯನ್ನು ಕಾಪಾಡಿ ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡಿರಿ. ಎಲ್ಲಾ ನೇಮಕಾತಿಗಳಿಗೆ ಅರ್ಹ ವಯೋಮಿತಿಯನ್ನುಕನಿಷ್ಠ ಐದು ವರ್ಷಗಳ ಸಡಿಲಿಕೆ ಮಾಡಬೇಕು ಎಂದರು.

ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗೆ ವಯೋಮಿತಿಯನ್ನು ಜಿ.ಎಂ, ಒಬಿಸಿ ಗೆ 30. ಎಸ್.ಸಿ, ಎಸ್.ಟಿ, ಕೇಟಗರಿ 1 ಕ್ಕೆ 33 ವರ್ಷಗಳಿಗೆ ಹೆಚ್ಚಿಸಿ. ಸರ್ಕಾರಿ ಇಲಾಖೆಗಳಲ್ಲಿ ದಿನಗೂಲಿ, ಗುತ್ತಿಗೆ, ಹೊರಗುತ್ತಿಗೆ ಪದ್ಧತಿಯನ್ನು ರದ್ದು ಮಾಡಿ, ಹಾಲಿ ಸೇವೆಯಲ್ಲಿ ಇರುವ ಇರುವವರನ್ನು ಖಾಯಂ ಮಾಡಬೇಕು. ಕೆಇಎಯ ಉದ್ಯೋಗ ನೇಮಕಾತಿ ನೋಟಿಫಿಕೇಶನ್‍ಗೆ ಅರ್ಜಿ ಶುಲ್ಕವನ್ನು ವಿಪರೀತ ಮಾಡಿರುವುದನ್ನು ತಕ್ಷಣವೇ ಕಡಿಮೆ ಮಾಡಬೇಕು ಎಂದರು.

ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿಯ ಜಿಲ್ಲಾ ಸಂಚಾಲಕ ಜಗದೀಶ್ ನೇಮಕಲ್ ಅವರು ಪ್ರತಿಭಟನೆಯ ಅಧ್ಯಕ್ಷತೆವಹಿಸಿದ್ದರು.

ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿ ಸಹ ಸಂಚಾಲಕರಾದ ಪುರುμÉೂೀತ್ತಮ, ಪ್ರಮೋದ್, ಆಂಜನೇಯ ಸದಸ್ಯರಾದ ಸುಜಾತ ನವಲಗುಂದ, ಸುರೇಶ್.ಎನ್. ಗೋಪಾಲ್, ಮೋಹನ್, ನಾಗರಾಜ್. ಎನ್., ಮಂಜುನಾಥ. ಟಿ., ಶಿವಶಂಕರ್ ಹಾಗೂ ಯುವಜನರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಪ್ರತಿಭಟನಾಕಾರರು ಬಳ್ಳಾರಿ ನಗರದ ಕಾಗೆ ಪಾರ್ಕ್‍ನಿಂದ ಹಳೆ ಡಿ.ಸಿ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ಸಾಗಿ, ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande