ಪಂಜಾಬ್‌ ಗೆ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್
ನವದೆಹಲಿ, 13 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಮಂಗಳವಾರ ಪಂಜಾಬ್‌ನ ಲುಧಿಯಾನಕ್ಕೆ ಭೇಟಿ ನೀಡಲಿದ್ದಾರೆ. ಈ ಭೇಟಿಯ ವೇಳೆ, ಅವರು ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ಮೆಕ್ಕೆ ಜೋಳ ಸಂಶೋಧನಾ ಸಂಸ್ಥೆಯಲ್ಲಿ ಹೊಸ ಆಡಳಿತ ಕಟ್ಟಡದ ಉದ್ಘಾಟನ
ಪಂಜಾಬ್‌ ಗೆ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್


ನವದೆಹಲಿ, 13 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಮಂಗಳವಾರ ಪಂಜಾಬ್‌ನ ಲುಧಿಯಾನಕ್ಕೆ ಭೇಟಿ ನೀಡಲಿದ್ದಾರೆ.

ಈ ಭೇಟಿಯ ವೇಳೆ, ಅವರು ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ಮೆಕ್ಕೆ ಜೋಳ ಸಂಶೋಧನಾ ಸಂಸ್ಥೆಯಲ್ಲಿ ಹೊಸ ಆಡಳಿತ ಕಟ್ಟಡದ ಉದ್ಘಾಟನೆ ನೆರವೇರಿಸಿ, ಪ್ರಮುಖ ಗ್ರಾಮೀಣಾಭಿವೃದ್ಧಿ ಯೋಜನೆಗಳ ಫಲಾನುಭವಿಗಳೊಂದಿಗೆ ಮಹಿಳಾ ಸ್ವಸಹಾಯ ಗುಂಪುಗಳ ಜೊತೆ ಸಂವಾದ ನಡೆಸಲಿದ್ದಾರೆ.

ಇದೇ ವೇಳೆ ಲುಧಿಯಾನದ ನೂರ್ಪುರ್ ಬೆಟ್‌ನಲ್ಲಿ ನಡೆಯುವ ಗ್ರಾಮ ಸಭೆಯಲ್ಲಿ ರೈತರೊಂದಿಗೆ ಚರ್ಚೆ ನಡೆಸಿ, SMS ಅಳವಡಿಸಲಾದ ಕಂಬೈನ್ ಹಾರ್ವೆಸ್ಟರ್ ಮತ್ತು ಹ್ಯಾಪಿ ಸ್ಮಾರ್ಟ್ ಸೀಡರ್ ಯಂತ್ರದ ನೇರ ಪ್ರದರ್ಶನ ವೀಕ್ಷಿಸಲಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande