ರಾಜು ತಾಳಿಕೋಟಿ ನಿಧನಕ್ಕೆ ಕೇಂದ್ರ ಸಚಿವ ಸಚಿವ ಪ್ರಲ್ಹಾದ ಜೋಶಿ ಸಂತಾಪ
ನವದೆಹಲಿ, 13 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಹಿರಿಯ ರಂಗಕರ್ಮಿ, ಹಾಸ್ಯ ಕಲಾವಿದ ಹಾಗೂ ಧಾರವಾಡದ ರಂಗಾಯಣ ನಿರ್ದೇಶಕರಾಗಿದ್ದ ರಾಜು ತಾಳಿಕೋಟೆ ಅವರ ನಿಧನಕ್ಕೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಉತ್ತರ ಕರ್ನಾಟಕ ಭಾಗದ ಮೇರು ಕಲಾವಿದರಾಗಿ, ಉತ್ತರ ಕರ್ನಾಟಕದ ಭಾಷಾ
ರಾಜು ತಾಳಿಕೋಟಿ ನಿಧನಕ್ಕೆ ಕೇಂದ್ರ ಸಚಿವ ಸಚಿವ ಪ್ರಲ್ಹಾದ ಜೋಶಿ ಸಂತಾಪ


ನವದೆಹಲಿ, 13 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಹಿರಿಯ ರಂಗಕರ್ಮಿ, ಹಾಸ್ಯ ಕಲಾವಿದ ಹಾಗೂ ಧಾರವಾಡದ ರಂಗಾಯಣ ನಿರ್ದೇಶಕರಾಗಿದ್ದ ರಾಜು ತಾಳಿಕೋಟೆ ಅವರ ನಿಧನಕ್ಕೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಉತ್ತರ ಕರ್ನಾಟಕ ಭಾಗದ ಮೇರು ಕಲಾವಿದರಾಗಿ, ಉತ್ತರ ಕರ್ನಾಟಕದ ಭಾಷಾ ಸೊಗಡನ್ನು ಪಸರಿಸಿದ ಒಬ್ಬ ಶ್ರೇಷ್ಠ ನಟನನ್ನು ಕಳೆದುಕೊಂಡಂತಾಗಿದೆ ಎಂದು ಸಚಿವರು ಕಂಬನಿ ಮಿಡಿದಿದ್ದಾರೆ.

ಹಲವು ಚಿತ್ರಗಳಲ್ಲಿ ಹಾಸ್ಯ ನಟನೆ ಮೂಲಕ ಕನ್ನಡಿಗರ ಮನರಂಜಿಸಿದ್ದಾರೆ. ʼಪಂಚರಂಗಿʼ, ʼಲೈಫು ಇಷ್ಟೇನೇʼ ಸೇರಿದಂತೆ ಹಲವು ಚಿತ್ರಗಳಲ್ಲಿ ಅತ್ಯದ್ಭುತವಾಗಿ ನಟಿಸಿದ ರಾಜು ತಾಳಿಕೋಟೆಯವರ ನಿಧನದಿಂದ ಚಿತ್ರರಂಗಕ್ಕೆ ತುಂಬಲಾರದ ನಷ್ಟ ಉಂಟಾಗಿದೆ ಎಂದು ಜೋಶಿ ದುಃಖ ವ್ಯಕ್ತಪಡಿಸಿದ್ದಾರೆ.

ರಾಜು ತಾಳಿಕೋಟೆ ಕುಟುಂಬಕ್ಕೆ ಮತ್ತು ಅಭಿಮಾನಿ ಬಳಗಕ್ಕೆ ದೇವರು ಅಗಲಿಕೆಯ ನೋವು ಸಹಿಸಿಕೊಳ್ಳುವ ಶಕ್ತಿ ನೀಡಲಿ, ಆತ್ಮಕ್ಕೆ ಶಾಂತಿ ‌ಕರುಣಿಸಲೆಂದು ಪ್ರಾರ್ಥಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande