ಅದ್ದೂರಿ ಕನ್ನಡ ರಾಜ್ಯೋತ್ಸವ ಆಚರಣೆಗೆ ಸಿದ್ದತೆ
ಅದ್ದೂರಿ ಕನ್ನಡ ರಾಜ್ಯೋತ್ಸವ ಆಚರಣೆಗೆ ಸಿದ್ದತೆ
ಚಿತ್ರ ; ಕೋಲಾರ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಕೋಲಾರ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಭುವನೇಶ್ವರಿ ಕನ್ನಡ ಸಂಘಟನೆ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆ ಮಾಡುವ ಸಲುವಾಗಿ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಅಪರ ಜಿಲ್ಲಾಧಿಕಾರಿ ಮಂಗಳ ಮಾತನಾಡಿದರು.


ಕೋಲಾರ, ೧೩ ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಕೋಲಾರ ಜಿಲ್ಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಚರಣೆ ಮಾಡಬೇಕು ಎಂದು ಅಧಿಕಾರಿಗಳಿಗೆ ಮತ್ತು ಸಂಘಟನೆಗಳ ಮುಖಂಡರಿಗೆ ಅಪರ ಜಿಲ್ಲಾಧಿಕಾರಿ ಮಂಗಳ ಸೂಚಿಸಿದರು.

ಕೋಲಾರ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಕೋಲಾರ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಭುವನೇಶ್ವರಿ ಕನ್ನಡ ಸಂಘಟನೆ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆ ಮಾಡುವ ಸಲುವಾಗಿ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.

ನವೆಂಬರ್ ಒಂದರಂದು ನಡೆಯುವಂತಹ ಕನ್ನಡ ರಾಜ್ಯೋತ್ಸವ ಆಚರಣೆ ಕಾರ್ಯಕ್ರಮವನ್ನು ಅದ್ದೂರಿಯಾಗಿ ಮಾಡುವ ಕುರಿತು ಅಪರ ಜಿಲ್ಲಾಧಿಕಾರಿ ಮಂಗಳ ಅವರು ಮಾತನಾಡಿ ಸಾಂಪ್ರದಾಯಿಕವಾಗಿ ಆಚರಣೆ ಮಾಡಲು ಸಿದ್ಧತೆಯನ್ನು ಮಾಡಿಕೊಳ್ಳಬೇಕಾಗಿದೆ ಎಂದು ತಿಳಿಸಿದರು.

ಕೋಲಾರ ನಗರದ ಗಾಂಧಿವನದಲ್ಲಿ ಮೊದಲು ಧ್ವಜಾರೋಹಣ ಮಾಡಿ ಸ್ತಬ್ಧಚಿತ್ರಗಳ ಮೆರವಣಿಗೆ ಚಾಲನೆ ನೀಡಲಾಗುವುದು ನಂತರ ಗಾಂಧಿವನದ ಮುಂಭಾಗದಲ್ಲಿಯೇ ವೇದಿಕೆ ಕಾರ್ಯಕ್ರಮವನ್ನು ಮಾಡಲಾಗುವುದು ಅದೇ ದಿನ ಸಂಜೆ ಶಿಕ್ಷಣ ಇಲಾಖೆಯಿಂದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಟಿ.ಚನ್ನಯ್ಯ ರಂಗಮಂದಿರದಲ್ಲಿ ಆಯೋಜಿಸುವುದಾಗಿ ತಿಳಿಸಿದರು.

ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಗೋಪಾಲ ಗೌಡ ಅವರು ಮಾತನಾಡಿ ಇಡೀ ನವೆಂಬರ್ ತಿಂಗಳು ಪೂರ್ತಿ ಕನ್ನಡ ಅಭಿವೃದ್ಧಿ ಕೆಲಸಗಳನ್ನು ಮಾಡಬೇಕು ಅದನ್ನು ವರ್ಷ ಪೂರ್ತಿ ಮುಂದುವರೆಸಿಕೊಂಡು ಹೋಗಬೇಕು ಎಂದರು, ಒಳಾಂಗಣ ಕ್ರೀಡಾಂಗಣಕ್ಕೆ ವರನಟ ಪದ್ಮಭೂಷಣ ಡಾ.ರಾಜ್ ಕುಮಾರ್ ಅವರ ಹೆಸರನ್ನು ಇಡಬೇಕು ಹಾಗೂ ಈಗಾಗಲೇ ಜಿಲ್ಲಾಧಿಕಾರಿಗಳ ಆಸಕ್ತಿಯಿಂದ ಕೋಲಾರಮ್ಮ ದೇವಾಲಯಕ್ಕೆ ನಿರ್ಮಾಣವಾಗುತ್ತಿರುವ ಮಹಾದ್ವಾರಕ್ಕೆ ಗಂಗರ ಮಹಾದ್ವಾರ ಎಂದು ನಾಮಕರಣ ಮಾಡಬೇಕು ಮತ್ತು ಕೋಲಾರ ನೂತನ ಬಸ್ ನಿಲ್ದಾಣದ ಮುಂಬಾಗದಲ್ಲಿ ತಾಯಿ ಭುವನೇಶ್ವರಿ ದೇವಿಯ ವಿಗ್ರಹ ಪ್ರತಿಷ್ಠಾಪನೆ ಮಾಡಬೇಕು,ಕುವೆಂಪು ಉದ್ಯಾನವನದಲ್ಲಿರುವ ಕುವೆಂಪು ಪ್ರತಿಮೆಯನ್ನು ನವೀಕರಣ ಮಾಡಬೇಕಾಗಿದೆ ಎಂದು ಮನವಿ ಮಾಡಿದರು.

ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿಗೆ ಸಮಿತಿಯು ವ್ಯಕ್ತಿಗಳನ್ನು ಆಯ್ಕೆಮಾಡುವಾಗ ಕನ್ನಡಪರ ಕೆಲಸಗಳನ್ನು ಮಾಡಿ ಹೋರಾಟ ಮಾಡಿರುವ ವ್ಯಕ್ತಿಗಳನ್ನು ಗೌರವಿಸಿ ಮುಖ್ಯ ವಾಹಿನಿಗೆ ತಂದು ಪ್ರಶಸ್ತಿಯನ್ನು ವಿತರಿಸಬೇಕು ಎಂದು ಹೇಳಿದರು. ಬೇರೆ ಭಾಷೆಗಳ ಪತ್ರಕರ್ತರಿಗೆ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ನೀಡುತ್ತಾರೆ ಅದನ್ನು ನಿಲ್ಲಿಸಿ ಕನ್ನಡ ಪತ್ರಿಕೋದ್ಯಮದಲ್ಲಿ ಕೆಲಸ ಮಾಡುವವರನ್ನು ಗುರುತಿಸಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ನೀಡಬೇಕು ಎಂದು ಮನವಿ ಮಾಡಿದರು.

ಶ್ರೀಭುವನೇಶ್ವರಿ ಕನ್ನಡ ಸಂಘದ ಅಧ್ಯಕ್ಷರಾದ ತ್ಯಾಗರಾಜ್ ಅವರು ಮಾತನಾಡಿ ನಾವು ಪ್ರತಿ ವರ್ಷವೂ ಕೋಲಾರ ಜಿಲ್ಲೆಯಲ್ಲಿ ಆಚರಣೆ ಮಾಡುವ ಕನ್ನಡ ರಾಜ್ಯೋತ್ಸವ ಆಚರಣೆಯು ಮಿನಿ ದಸರಾ ಎಂದೇ ಖ್ಯಾತಿಯನ್ನು ಪಡೆದಿದೆ ಅದೇರೀತಿ ಈ ವರ್ಷವೂ ಸಹ ಅರಣ್ಯ ಇಲಾಖೆಯ ಸಹಕಾರದಿಂದ ಆನೆಯ ಮೇಲೆ ತಾಯಿ ಭುವನೇಶ್ವರಿ ದೇವಿಯ ಮೆರವಣಿಗೆಯನ್ನು ನಗರದ ಪ್ರಮುಖ ರಸ್ತೆಗಳಲ್ಲಿ ಮಾಡಲಾಗುವುದು ಎಂದು ತಿಳಿಸಿದರು.

ನಗರದಲ್ಲಿ ಅನೇಕ ಹಿರಿಯ ನಾಗರಿಕರ ಸಲಹೆ ಸೂಚನೆ ಮತ್ತು ಮಾರ್ಗದರ್ಶ ನದೊಂದಿಗೆ ಅದ್ದೂರಿಯಾಗಿ ರಾಜ್ಯೋತ್ಸವ ಮಾಡಿಕೊಂಡು ಬರುತ್ತಿದ್ದು ನಾವು ಅದನ್ನು ಮುಂದುವರೆಸುವುದಾಗಿ ತಿಳಿಸಿ ಆನೆಯು ಪ್ರಮುಖ ರಸ್ತೆಗಳಲಿಮೆವ ಮಾಡುವುದರಿಂದ ಸಾರ್ವಜನಿಕರು ತಮ್ಮ ಸುತ್ತಮುತ್ತಲಿನ ರಸ್ತೆಗಳನ್ನು ಸ್ವಚ್ಛತೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ವಿಜಯ ಲಕ್ಷ್ಮಿ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇ ಶಕರಾದ ಶ್ರೀನಿವಾಸ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಧಿಕಾರಿ ಗೀತಾ, ನಗರಸಭೆ ಆಯುಕ್ತರಾದ ನವೀನ್ ಚಂದ್ರ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಗೀತಮ್ಮ, ಕನ್ನಡಪರ ಸಂಘಟನೆಗಳ ಮುಖಂಡರಾದ ಕಲಾವಿದ ವಿಷ್ಣು, ಕೊ.ನ. ಪ್ರಭಾಕರ್, ಆ.ಕೃ.ಸೋಮಶೇಖರ್, ಸೋಮಣ್ಣ, ಅಬ್ಬಣಿ ಶಿವಣ್ಣ, ಸುರೇಶ್ ಕುಮಾರ್, ರಾಘ ವೇಂದ್ರ, ರಾಜಪ್ಪ ಬ.ಹಾ.ಶೇಖರಪ್ಪ, ಕೃಷ್ಣೇಗೌಡ, ಇದ್ದರು.

ಚಿತ್ರ ; ಕೋಲಾರ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಕೋಲಾರ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಭುವನೇಶ್ವರಿ ಕನ್ನಡ ಸಂಘಟನೆ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆ ಮಾಡುವ ಸಲುವಾಗಿ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಅಪರ ಜಿಲ್ಲಾಧಿಕಾರಿ ಮಂಗಳ ಮಾತನಾಡಿದರು.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande