ಬಳ್ಳಾರಿ, 14 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾನೂನು ಅಭಿರಕ್ಷಕರ ಕಚೇರಿಯಲ್ಲಿ ತಾತ್ಕಾಲಿಕ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿಗಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಉಪ ಕಾನೂನು ನೆರವು ಅಭಿರಕ್ಷಕರ ಹುದ್ದೆ 01 ಮತ್ತು ಕಚೇರಿ ಸಹಾಯಕ ಹುದ್ದೆ 01 ಇವುಗಳಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುವುದು.
ಮಾಹೆಯಾನ ಉಪ ಕಾನೂನು ನೆರವು ಅಭಿರಕ್ಷಕರ ಮಾಸಿಕ ವೇತನ ರೂ.45 ಸಾವಿರ ಮತ್ತು ಕಚೇರಿ ಸಹಾಯಕರ ವೇತನ ರೂ.19,695 ಸಂಚಿತ ಸಂಭಾವನೆ ನೀಡಲಾಗುವುದು.
ನೇಮಕಾತಿಗಳು ತಾತ್ಕಾಲಿಕವಾಗಿದ್ದು, ಪ್ರಾಧಿಕಾರವು ನೇಮಕಾತಿಯನ್ನು ಯಾವುದೇ ನೋಟೀಸನ್ನು ನೀಡದೇ ರದ್ದುಗೊಳಿಸುವ ಅಧಿಕಾರ ಹೊಂದಿರುತ್ತದೆ.
ಅರ್ಹ ಅಭ್ಯರ್ಥಿಗಳು ಅರ್ಜಿ ನಮೂನೆ ಪಡೆದು ಭರ್ತಿ ಮಾಡಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಬಳ್ಳಾರಿ ಕಚೇರಿಗೆ ಅರ್ಜಿ ಸಲ್ಲಿಸಬೇಕು ಹಾಗೂ ಇತ್ತೀಚಿನ 3 ಪಾಸ್ ಪೋಟೋ ಲಗತ್ತಿಸಬೇಕು. ಅರ್ಜಿ ಸಲ್ಲಿಸಲು ಅಕ್ಟೋಬರ್ 25 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ನಗರದ ತಾಳೂರು ರಸ್ತೆಯ ನೂತನ ಜಿಲ್ಲಾ ನ್ಯಾಯಾಲಯ ಸಂಕೀರ್ಣದ ಮೂರನೇ ಮಹಡಿಯ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಚೇರಿಗೆ ಸಂಪರ್ಕಿಸಬಹುದು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆದ ಕೆ.ಜಿ.ಶಾಂತಿ ಅವರು ತಿಳಿಸಿದ್ದಾರೆ..
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್