ರಾಯಚೂರು, 14 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಪ್ರಾಣದ ಹಂಗು ತೊರೆದು ಹಾಗೂ ಸಮಯ ಪ್ರಜ್ಞೆಯಿಂದ ಇತರರ ಪ್ರಾಣದ ರಕ್ಷಣೆಗಾಗಿ ಧೈರ್ಯ ಸಾಹಸ ಪ್ರದರ್ಶಿಸಿದ 6 ರಿಂದ 18 ವರ್ಷದೊಳಗಿನ ಬಾಲಕರಿಗೆ ‘ಹೊಯ್ಸಳ’ ಮತ್ತು ಬಾಲಕಿಯರಿಗೆ ‘ಕೆಳದಿಚೆನ್ನಮ್ಮ’ ಶೌರ್ಯ ಪ್ರಶಸ್ತಿ ನೀಡಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಅರ್ಜಿ ಆಹ್ವಾನಿಸಿದೆ. ಜೊತೆಗೆ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ವ್ಯಕ್ತಿಗಳಿಗೆ ಮತ್ತು ಸಂಸ್ಥೆಗಳಿಗೆ ರಾಜ್ಯ ಪ್ರಶಸ್ತಿ ನೀಡಲು ನಾಮ ನಿರ್ದೇಶನಗಳನ್ನು ಅರ್ಜಿ ಆಹ್ವಾನಿಸಲಾಗಿದೆ.
01-08-2023 ರಿಂದ 31-07-2024 ರೊಳಗಿನ ಅವಧಿಯಲ್ಲಿ ಸಾಧನೆ ಮಾಡಿದ, ದಿನಾಂಕ 01-08-2006ರಂದು ಹಾಗೂ ನಂತರ ಜನಿಸಿದ ಮಕ್ಕಳು ಈ ಪ್ರಶಸ್ತಿಗೆ ಅರ್ಹರಾಗಿರುತ್ತರೆ.
ಪ್ರಶಸ್ತಿಗೆ ಆಯ್ಕೆಯಾದ ಮಕ್ಕಳಿಗೆ ತಲಾ 10,000 ರೂ.ಗಳ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಲಾಗುತ್ತದೆ. ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಠ 05 ವರ್ಷಗಳ ಕಾಲ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ ತಲಾ 25,000 ರೂ. ನಗದು ಬಹುಮಾನ ಮತು ಪ್ರಶಸ್ತಿ ಪತ್ರ ಹಾಗೂ ಸಂಸ್ಥೆಗಳಿಗೆ ತಲಾ 1,00,000 ರೂ. ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರವನ್ನು ನೀಡಿ ಗೌರವಿಸಲಾಗುತ್ತದೆ.
ಆಸಕ್ತರು, ನಿಗದಿಪಡಿಸಿರುವ ಅರ್ಜಿ ನಮೂನೆಗಳನ್ನು ಭರ್ತಿ ಮಾಡಿ ಅಕ್ಟೋಬರ್ 25 ರೊಳಗಾಗಿ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರಾಯಚೂರು ಇವರಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿಗಳು, ಉಪ ನಿರ್ದೇಶಕರ ಕಚೇರಿ, ಮಂತ್ರಾಲಯ ರೋಡ್ ಐಡಿಎಸ್.ಎಮ್.ಟಿ ಲೇಔಟ್ ಎದರುಗಡೆ ರಾಯಚೂರು ಇಲ್ಲಿಗೆ ಭೇಟಿ ನೀಡಬಹುದಾಗಿದೆ.
ಅಥವಾ ದೂರವಾಣಿ ಸಂಖ್ಯೆ: 08532295646ಗೆ ಸಂಪರ್ಕ ಮಾಡಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್