ವಿಜಯಪುರ, 14 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಎಚ್.ಐವಿ, ಏಡ್ಸ್ ಜಾಗೃತಿಗಾಗಿ ಕಾಲೇಜು ವಿದ್ಯಾರ್ಥಿಗಳಿಗೆ ಹಮ್ಮಿಕೊಂಡ ರಾಜ್ಯ ಮಟ್ಟದ ೫ ಕಿ.ಮೀ ರೆಡ್ ರಿಬ್ಬನ್ ರನ್ ಮ್ಯಾರಥಾನ್ ಸ್ಪರ್ಧೆಗೆ ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ್ ಮಂಗಳವಾರ ಚಾಲನೆ ನೀಡಿದರು.
ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ರಾಜ್ಯ ಏಡ್ಸ್ ಪ್ರವೆನ್‌ಷನ್ ಸೊಸೈಟಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಮ ಜಿಲ್ಲಾ ಏಡ್ಸ್ ಪ್ರತಿಬಂಧಕ ಹಾಗೂ ನಿಯಂತ್ರಣ ಘಟಕ ಹಾಗೂ ಜಿಲ್ಲಾ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡ ಮ್ಯಾರಥಾನ್ ಸ್ಪರ್ಧೆಗೆ ಚಾಲನೆ ನೀಡಿ ಮಾತನಾಡಿದ ಅವರು ಯುವಕರಲ್ಲಿ ಎಚ್.ಐ.ವಿ, ಏಡ್ ಬಗ್ಗೆ ಜಾಗೃತಿ ಮೂಡಿಸಲು ಯುಜನೋತ್ಸವ ಅಂಗವಾಗಿ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಈಗಾಗಲೇ ಜಿಲ್ಲಾ ಮಟ್ಟದಲ್ಲಿ ಮ್ಯಾರಥಾನ್ ಸ್ಪರ್ಧೆ ನಡೆದಿದ್ದು, ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ಕಾಲೇಜು ವಿದ್ಯಾರ್ಥಿಗಳು ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿದ್ದಾರೆ. ರಾಜ್ಯ ಮಟ್ಟದ ಮ್ಯಾರಥಾನ್ ಸ್ಪರ್ಧೆ ಬಾಗಲಕೋಟೆಯಲ್ಲಿ ಜರಗುತ್ತಿರುವುದು ಹೆಮ್ಮೆಯ ವಿಷಯವಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಯುಥ ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ ಐಇಸಿ ವಿಭಾಗದ ಉಪನಿರ್ದೇಶಕ ಗೋವಿಂದ ರಾಜು, ಯುಥ ಕಸಾಪ್ಸನ ಸಹಾಯಕ ನಿರ್ದೇಶಕ ನಂಜೇಗೌಡ, ಯುಥ ಜಿಲ್ಲಾ ಏಡ್ಸ್ ನಿಯಂತ್ರಣ ಅಧಿಕಾರಿ ಡಾ.ಸುವರ್ಣ ಕುಲಕರ್ಣಿ, ಸೇರಿದಂತೆ ಏಡ್ಸ್ ನಿಯಂತ್ರಣ ಘಟಕ ಸಿಬ್ಬಂದಿ ವರ್ಗದವರು ಇದ್ದರು.
ಮ್ಯಾರಥಾನ್ ಸ್ಪರ್ಧೆ ಜಿಲ್ಲಾಡಳಿತ ಭವನದಿಂದ ಪ್ರಾರಂಭವಾಗಿ ಎ.ಪಿ.ಎಂ.ಸಿ, ಬಜಾಜ್ ಶೋರೂಮ್ ಮೂಲಕ ಮರಳಿ ಅಗ್ನಿಶಾಮಕ ಕಚೇರಿಗೆ ಮುಕ್ತಾಯಗೊಂಡಿತು. ಮ್ಯಾರಥಾನ್ ಸ್ಪರ್ಧೆಯಲ್ಲಿ ಪ್ರತಿ ಜಿಲ್ಲೆಯಿಂದ ಪ್ರಥಮ ಸ್ಥಾನ ಪಡೆದ ಕಾಲೇಜ ವಿದ್ಯಾರ್ಥಿ ವಿದ್ಯಾರ್ಥಿನಿಯರು ಭಾಗವಹಿಸಿದ್ದರು. ಪುರುಷರ ವಿಭಾಗದಲ್ಲಿ ಪ್ರಭು ಲಮಾಣಿ (ಪ್ರಥಮ), ಸಂಗಮೇಶ ಹಳ್ಳಿ (ದ್ವಿತೀಯ), ವೈಭವ ಪಾಟೀಲ (ತೃತೀಯ) ಸ್ಥಾನ ಪಡೆದುಕೊಂಡರೆ, ಮಹಿಳಾ ವಿಭಾಗದಲ್ಲಿ ಎಚ್.ವಿ.ದೀಕ್ಷಾ (ಪ್ರಥಮ), ಸಸಾಕ್ಷಿ (ದ್ವಿತೀಯ), ಯುವರಾಣಿ (ತೃತೀಯ) ಸ್ಥಾನ ಪಡೆದುಕೊಂಡರು. ವಿಜೇತರಾದವರಿಗೆ ತಲಾ ಪ್ರಥಮ ೨೫ ಸಾವಿರ ರೂ, ದ್ವಿತೀಯ ೨೦ ಸಾವಿರ ರೂ, ತೃತೀಯ ೧೫ ಸಾವಿರ ರೂ.ಗಳ ನಗದು, ಪ್ರಶಸ್ತಿ ಪತ್ರ ಹಾಗೂ ಮೆಡಲ್ ನೀಡಲಾಯಿತು. ಸಮಾಧಾನಕರ ಬಹುಮಾನವನ್ನು ಪುರುಷ ವಿಭಾಗದಲ್ಲಿ ಬಾಲು ಹೆಗ್ಗಿ, ಬೈರು ನಾಯಕ, ರಮೇಶ, ಮಹಿಳಾ ವಿಭಾಗದಲ್ಲಿ ಶ್ರೇಯಾ ಎಂ, ಅಕ್ಷರಾ ಮಾಜುಕರ, ಯಲ್ಲಮ್ಮ ಪಡೆದುಕೊಂಡರು.
ಹಿಂದೂಸ್ತಾನ್ ಸಮಾಚಾರ್ / jyothi deshpande