ವಿಜಯಪುರ, 14 ಅಕ್ಟೋಬರ್ (ಹಿ.ಸ.)
ಆ್ಯಂಕರ್ : ಹೃದಯಾಘಾತದಿಂದ ಸಾವನ್ನಪ್ಪಿದ ಹಾಸ್ಯ ನಟ ರಾಜು ತಾಳಿಕೋಟಿ ಅಂತ್ಯ ಸಂಸ್ಕಾರ ವಿಜಯಪುರ ಜಿಲ್ಲೆ ಸಿಂದಗಿ ತಾಲೂಕಿನ ಚಿಕ್ಕಸಿಂದಗಿಯ ಖಬರಸ್ತಾನದಲ್ಲಿ ನೆರವೇರಿತು. ಮುಸ್ಲಿಂ ಸಂಪ್ರದಾಯದಂತೆ ಅಂತ್ಯಕ್ರಿಯೆ ಮಾಡಲಾಗಿದೆ.
ಹಾಸ್ಯ ಭರಿತ ನಾಟಕಗಳು, ಆಡಿಯೋ ಕ್ಯಾಸೇಟ್‌ಗಳು, ತಮ್ಮ ಹಾಸ್ಯಭರಿತ ನಟನಾ ಶೈಲಿಯಿಂದ ಸ್ಯಾಂಡಲ್‌ವುಡ್‌ನಲ್ಲಿ ಜನಪ್ರಿಯತೆ ಪಡೆದಿದ್ದ ರಾಜು ತಾಳಿಕೋಟಿ ವಿಧಿವಶರಾಗಿದ್ದಾರೆ. ಸಿನಿಮಾ ಶೂಟಿಂಗ್ ಸಲುವಾಗಿ ಉಡುಪಿಗೆ ತೆರಳಿದ್ದ ರಾಜು ತಾಳಿಕೋಟಿಗೆ ಅ.13ರಂದು ಹೃದಯಾಘಾತ ಆಗಿತ್ತು. ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.
ಮುಸ್ಲಿಂ ಸಂಪ್ರದಾಯದ ವಿಧಿಗಳನ್ನು ನೆರವೇರಿಸಲಾಯಿತು. ತೋಟದ ಮನೆಯಿಂದ ಮೃತ ದೇಹವನ್ನು ಮೆರವಣಿಗೆ ಮೂಲಕ ಚಿಕ್ಕ ಸಿಂದಗಿ ಗ್ರಾಮದ ಖಬರಸ್ತಾನಕ್ಕೆ ತೆಗೆದುಕೊಂಡು ಬರಲಾಯಿತು. ಅಲ್ಲಿ ಅಂತಿಮ ಪ್ರಾರ್ಥನೆ ಸಲ್ಲಿಕೆ ಮಾಡಲಾಯಿತು. ಬಳಿಕ ಅಂತಿಮ ಕ್ರಿಯಾ ವಿಧಾನಗಳು ನಡೆದವು. ಈ ವೇಳೆ ಕಲಾವಿದರು, ಗ್ರಾಮಸ್ಥರು ಸೇರಿದಂತೆ, ಸಾವಿರಾರು ಅಭಿಮಾನಿಗಳು ಅಂತ್ಯಕ್ರಿಯೆಯಲ್ಲಿ ಭಾಗವಹಿಸಿ ನಗುವಿನ ನಾಯಕನಿಗೆ ಅಂತಿಮ ವಿದಾಯ ಹೇಳಿದರು.
ಹಿಂದೂಸ್ತಾನ್ ಸಮಾಚಾರ್ / jyothi deshpande