ಕೊಪ್ಪಳ, 14 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ರಾಷ್ಟ್ರೀಯ ಬ್ಯಾಂಕ್ (ನಬಾರ್ಡ್) ಬೆಂಗಳೂರು, ಇವರ ವತಿಯಿಂದ ಇರಕಲ್ಲಗಡದ ಗವಿಸಿದ್ದೇಶ್ವರ ರೈತ ಉತ್ಪಾದಕರ ಕಂಪನಿ ಲಿಮಿಟೆಡ್ ಇವರ ಸಹಯೋಗದಲ್ಲಿ ನಾಳೆ ಬೆಳಿಗ್ಗೆ 10 ಗಂಟೆಗೆ ಮೆತ್ತಗಲ್ಲ ಗ್ರಾಮದ ಆದಿಬಸವೇಶ್ವರ ದೇವಸ್ಥಾನದ ಹತ್ತಿರ ನಿರ್ಮಾಣವಾದ ಕೃಷಿ ಸಂಸ್ಕರಣಾ ಘಟಕಕ್ಕಾಗಿ ತರಬೇತಿ ಮತ್ತು ಸಾಮಾನ್ಯ ಸೌಲಭ್ಯ ಕೇಂದ್ರದ ಉದ್ಘಾಟನಾ ಸಮಾರಂಭವನ್ನು ಆಯೋಜಿಸಲಾಗಿದೆ.
ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಕೃಷಿ ಸಂಸ್ಕರಣಾ ಘಟಕಕ್ಕಾಗಿ ತರಬೇತಿ ಮತ್ತು ಸಾಮಾನ್ಯ ಸೌಲಭ್ಯ ಕೇಂದ್ರದ ಉದ್ಘಾಟನೆ ಮಾಡುವರು, ಕರ್ನಾಟಕ ಸರ್ಕಾರದ ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಸಂಗಪ್ಪ ತಂಗಡಗಿ, ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರು ಹಾಗೂ ಕುಷ್ಟಗಿ ಶಾಸಕರಾದ ದೊಡ್ಡನಗೌಡ ಹನುಮಗೌಡ ಪಾಟೀಲ, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಹಾಗೂ ಯಲಬುರ್ಗಾ ಶಾಸಕರಾದ ಬಸವರಾಜ ರಾಯರಡ್ಡಿ ಅವರು ಘನ ಉಪಸ್ಥಿತಿ ವಹಿಸುವರು.
ಗಂಗಾವತಿ ಶಾಸಕರಾದ ಜಿ.ಜನಾರ್ಧನರೆಡ್ಡಿ, ಅವರು ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಕೊಪ್ಪಳ ಸಂಸದರಾದ ಕೆ.ರಾಜಶೇಖರ ಹಿಟ್ನಾಳ, ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ, ವಿಧಾನ ಪರಿಷತ್ ಸದಸ್ಯರಾದ ಶಶೀಲ್ ಜಿ.ನಮೋಶಿ, ಡಾ.ಚಂದ್ರಶೇಖರ ಬಿ.ಪಾಟೀಲ, ಶರಣಗೌಡ ಅನ್ನದಾನಗೌಡ ಪಾಟೀಲ ಬಯ್ಯಾಪೂರ ಹಾಗೂ ಹೇಮಲತಾ ನಾಯಕ, ಮುನಿರಾಬಾದ್ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ ತುಂಗಭದ್ರಾ ಯೋಜನೆಯ ಅಧ್ಯಕ್ಷರಾದ ಹಸನಸಾಬ ನಭಿಸಾಬ ದೋಟಿಹಾಳ ಹಾಗೂ ವನಬಳ್ಳಾರಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಅಂಬಮ್ಮ ಶ್ರೀಕಂಠ ಹುಲಸನಹಟ್ಟಿ ಅವರು ಉಪಸ್ಥಿತರಿರುವರು.
ವಿಶೇಷ ಆಹ್ವಾನಿತರಾಗಿ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ. ಶಾಲಿನಿ ರಜನೀಶ್, ಭಾರತ ಸರಕಾರ ಹಣಕಾಸು ಸಚಿವಾಲಯದ ಹಣಕಾಸು ಸೇವೆಗಳ ಕಾರ್ಯದರ್ಶಿಗಳಾದ ಎಮ್.ನಾಗರಾಜ, ಕರ್ನಾಟಕ ಸರಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಅಭಿವೃದ್ಧಿ ಆಯುಕ್ತರಾದ ಉಮಾ ಮಹಾದೇವನ್, ಕರ್ನಾಟಕ ಸರಕಾರದ ಹಣಕಾಸು ಇಲಾಖೆಯ ಕಾರ್ಯದರ್ಶಿಗಳಾದ ಡಾ. ವಿಶಾಲ ಆರ್., ಯೋಜನಾ ಕಾರ್ಯಕ್ರಮ ಮೇಲ್ವಿಚಾರಣೆ ಮತ್ತು ಅಂಕಿ ಅಂಶ, ಇಲಾಖೆಯ ಕಾರ್ಯದರ್ಶಿಗಳಾದ ರಾಮನದೀಪ ಚೌದರಿ, ವಸತಿ ಇಲಾಖೆ ಸರ್ಕಾರದ ಕಾರ್ಯದರ್ಶಿಗಳು, ಕೃಷ್ಣಭಾಗ್ಯ ಜಲನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಬಾಗಲಕೋಟೆಯ ಕೃಷ್ಣಾ ಮೇಲ್ದಂಡೆ ಯೋಜನೆಯ ಭೂಸ್ವಾಧೀನ, ಪುನರ್ವಸತಿ ಮತ್ತು ಪುನರ್ ನಿರ್ಮಾಣ ಆಯುಕ್ತರು ಮತ್ತು ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಕೆ.ಪಿ ಮೋಹನರಾಜ್, ಕೊಪ್ಪಳ ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್ ಎಲ್. ಅರಸಿದ್ದಿ, ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ನಬಾರ್ಡ್)ನ ಅಧ್ಯಕ್ಷರಾದ ಕೆ.ವಿ. ಶಾಜಿ ಅವರು ಭಾಗವಹಿಸುವರು ಎಂದು ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್