ಗುರುವಾರ ರಾಯಚೂರು ಜಿಲ್ಲೆಗೆ ಸಚಿವರಾದ ನಿರ್ಮಲಾ ಸೀತಾರಾಮನ್ ಭೇಟಿ
ರಾಯಚೂರು , 14 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಕೇಂದ್ರ ಹಣಕಾಸು ಮತ್ತು ಕಾಪೋರೇಟ್ ವ್ಯವಹಾರಗಳ ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಅಕ್ಟೋಬರ್ 16ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅಂದು ಬೆಳಿಗ್ಗೆ 11 ಗಂಟೆಗೆ ಸಿಂಧನೂರು ತಾಲೂಕಿನ ಜವಳಗೇರಾ ಗ್ರಾಮಕ್ಕೆ ಭೇಟಿ ನೀಡಿ, ಕ
ಗುರುವಾರ ರಾಯಚೂರು ಜಿಲ್ಲೆಗೆ ಸಚಿವರಾದ ನಿರ್ಮಲಾ ಸೀತಾರಾಮನ್ ಭೇಟಿ


ರಾಯಚೂರು , 14 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಕೇಂದ್ರ ಹಣಕಾಸು ಮತ್ತು ಕಾಪೋರೇಟ್ ವ್ಯವಹಾರಗಳ ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಅಕ್ಟೋಬರ್ 16ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.

ಅಂದು ಬೆಳಿಗ್ಗೆ 11 ಗಂಟೆಗೆ ಸಿಂಧನೂರು ತಾಲೂಕಿನ ಜವಳಗೇರಾ ಗ್ರಾಮಕ್ಕೆ ಭೇಟಿ ನೀಡಿ, ಕೃಷಿ ಸಂಸ್ಕರಣೆ, ರೈತರ ತರಬೇತಿ ಕೇಂದ್ರ ಮತ್ತು ಸಾಮಾನ್ಯ ಸೌಲಭ್ಯ ಕೇಂದ್ರ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿಯಾಗುವರು.

ಮಧ್ಯಾಹ್ನ 12 ಗಂಟೆಗೆ ಜವಳಗೇರಾದಿಂದ ನಿರ್ಗಮಿಸಿ 12.20ಕ್ಕೆ ಸಿಂಧನೂರ ನಗರದ ನಿರೀಕ್ಷಣಾ ಮಂದಿರಕ್ಕೆ ತೆರಳುವರು. ಅಲ್ಲಿಂದ ಮಧ್ಯಾಹ್ನ 1 ಗಂಟೆಗೆ ನಿರ್ಗಮಿಸಿ ಬಳ್ಳಾರಿ ಜಿಲ್ಲೆಯತ್ತ ಪ್ರಯಾಣ ಬೆಳೆಸಲಿದ್ದಾರೆ ಎಂದು ಕೇಂದ್ರ ಹಣಕಾಸು ಮತ್ತು ಕಾಪೋರೇಟ್ ವ್ಯವಹಾರಗಳ ಸಚಿವರ ಹೆಚ್ಚುವರಿ ಖಾಸಗಿ ಕಾರ್ಯದರ್ಶಿ ಅವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande