ವಿಜಯಪುರ, 14 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ವಿಜಯಪುರ ಬಿ.ಎಲ್.ಡಿ.ಇ ಸಂಸ್ಥೆ ಕಾಲೇಜು ನಿವೃತ್ತ ಪ್ರಾಚಾರ್ಯ ವೆಂಕಪ್ಪ ಲಕ್ಷ್ಮಣಪ್ಪ ಚನ್ನಾಳ (73) ಅನಾರೋಗ್ಯದಿಂದ ಇಂದು ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಮೃತರು ಬಿ.ಎಲ್.ಡಿ.ಇ ಸಂಸ್ಥೆಯ ಕಾಲೇಜುಗಳಲ್ಲಿ ಪ್ರಾಧ್ಯಾಪಕರಾಗಿ, ಕೆ.ಸಿ.ಪಿ ವಿಜ್ಞಾನ, ವಾಣಿಜ್ಯ ಮತ್ತು ಮಹಿಳಾ ಮಹಾವಿದ್ಯಾಲಯಗಳಲ್ಲಿ ಪ್ರಾಚಾರ್ಯರಾಗಿ ಸುಧೀರ್ಘ ಸೇವೆ ಸಲ್ಲಿಸಿದ್ದಾರೆ. ಪ್ರಗತಿಪರ ದ್ರಾಕ್ಷಿ ಬೆಳೆಗಾರರಾದ ಇವರು ಈ ಹಿಂದೆ ದ್ರಾಕ್ಷಿ ಬೆಳೆಗಾರರ ಸಂಘದ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು.
ನಿವೃತ್ತಿಯ ನಂತರ ಬಬಲೇಶ್ವರ ತಾಲೂಕಿನ ಕೆಂಗಲಗುತ್ತಿ ಗ್ರಾಮದಲ್ಲಿ ನೆಲೆಸಿ, ಉತ್ತಮ ಗುಣಮಟ್ಟದ ದ್ರಾಕ್ಷಿ ಬೆಳೆದು, ಅಂತರ್ ರಾಷ್ಟ್ರೀಯ ಮಾರುಕಟ್ಟೆಗೆ ರಪ್ತು ಮಾಡುತ್ತಿದ್ದರು.
ಮೃತರು ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿ, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು-ಬಳಗ ಅಗಲಿದ್ದಾರೆ. ಆದಾಯ ತೆರಿಗೆ ಇಲಾಖೆ ಕರ್ನಾಟಕ ವೃತ್ತ ಪ್ರಧಾನ ಆಯುಕ್ತ ಶ್ರೀನಿವಾಸ ಬಿದರಿ ಮೃತರ ಅಳಿಯಂದಿರು.
ಸಂತಾಪ: ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ ಅವರು ಪ್ರೊ. ವಿ.ಎಲ್.ಚನ್ನಾಳ ಅವರ ನಿಧನ ನೋವು ತಂದಿದೆ. ಮೃತರ ಆತ್ಮಕ್ಕೆ ಶಾಂತಿ ದೊರೆಯಲಿ. ಕುಟುಂಬಕ್ಕೆ ದುಖಃ ಭರಿಸುವ ಶಕ್ತಿ ನೀಡಲಿ ಎಂದು ಸಂತಾಪದಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / jyothi deshpande