ಬಳ್ಳಾರಿ, 14 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ನಡೆಯುತ್ತಿದ್ದು, ಅರ್ಹ ಮತದಾರರು ನಿಗದಿತ ನಮೂನೆ-19 ನ್ನು ಭರ್ತಿ ಮಾಡಿ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಬೇಕು ಎಂದು ಬಳ್ಳಾರಿ ತಾಲ್ಲೂಕು ತಹಸೀಲ್ದಾರರಾದ ರೇಖಾ.ಟಿ ಅವರು ತಿಳಿಸಿದ್ದಾರೆ.
ಅರ್ಜಿಯೊಂದಿಗೆ ಶೈಕ್ಷಣಿಕ ಸಂಸ್ಥೆಗಳಲ್ಲಿ ನ.01ರ ಅರ್ಹತಾ ದಿನಾಂಕಕ್ಕೆ ಮೊದಲು 06 ವರ್ಷಗಳ ಅವಧಿಯಲ್ಲಿ ಕನಿಷ್ಠ 3 ವರ್ಷ ಬೋಧನಾ ವೃತ್ತಿಯಲ್ಲಿ ನಿರತರಾಗಿರುವ ಕುರಿತು ಶೈಕ್ಷಣಿಕ ಸಂಸ್ಥೆಗಳಿ0ದ ಅನುಬಂಧ-2 ರಲ್ಲಿ ಪ್ರಮಾಣ ಪತ್ರದೊಂದಿಗೆ ಬಳ್ಳಾರಿ ತಾಲ್ಲೂಕು ಕಚೇರಿಗೆ ಸಲ್ಲಿಸಬೇಕು.
ಈ ಹಿಂದೆ ಹೆಸರು ಸೇರ್ಪಡೆಯಾಗಿರುವವರು ಸಹ ಇದೀಗ ಪುನ: ನಮೂನೆ-19ರಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ನ.06 ಕೊನೆಯ ದಿನ.
ನವೆಂಬರ್ 25ರಂದು ಕರಡು ಪಟ್ಟಿ ಪ್ರಕಟವಾಗಲಿದ್ದು, ಡಿಸೆಂಬರ್ 10 ರ ವರೆಗೆ ಆಕ್ಷೇಪಣೆ ಆಹ್ವಾನಿಸಲಾಗುತ್ತದೆ. ಅಂತಿಮ ಪಟ್ಟಿ ಡಿಸೆಂಬರ್ 30ರಂದು ಪ್ರಕಟವಾಗಲಿದೆ. ಶಿಕ್ಷಕರು ನಿಗದಿತ ದಿನಾಂಕದೊಳಗೆ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ಸೇರ್ಪಡೆ ಮಾಡಿಸಬೇಕು ಎಂದು ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್