ದೆಹಲಿ-ಎನ್‌ಸಿಆರ್‌ನಲ್ಲಿ ಹಸಿರು ಪಟಾಕಿಗಳಿಗೆ ಷರತ್ತುಬದ್ಧ ಅನುಮತಿ ; ಸುಪ್ರೀಂ ಕೋರ್ಟ್ ತೀರ್ಪು
ನವದೆಹಲಿ, 15 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ದೆಹಲಿ-ಎನ್‌ಸಿಆರ್ ಪ್ರದೇಶದಲ್ಲಿ ಹಸಿರು ಪಟಾಕಿಗಳ ತಯಾರಿಕೆ ಮತ್ತು ಮಾರಾಟಕ್ಕೆ ಷರತ್ತುಬದ್ಧ ಅನುಮತಿ ನೀಡಿದೆ. ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ನೇತೃತ್ವದ ಪೀಠವು ಇಂದಿನಿಂದ ಅಕ್ಟೋಬರ್ 21ರವ
SC


ನವದೆಹಲಿ, 15 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ದೆಹಲಿ-ಎನ್‌ಸಿಆರ್ ಪ್ರದೇಶದಲ್ಲಿ ಹಸಿರು ಪಟಾಕಿಗಳ ತಯಾರಿಕೆ ಮತ್ತು ಮಾರಾಟಕ್ಕೆ ಷರತ್ತುಬದ್ಧ ಅನುಮತಿ ನೀಡಿದೆ.

ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ನೇತೃತ್ವದ ಪೀಠವು ಇಂದಿನಿಂದ ಅಕ್ಟೋಬರ್ 21ರವರೆಗೆ ಹಸಿರು ಪಟಾಕಿಗಳನ್ನು ಮಾರಾಟ ಮತ್ತು ಬಳಕೆಗೆ ಅವಕಾಶ ನೀಡಿದೆ.

ಪಟಾಕಿ ಸಿಡಿಸುವ ಸಮಯವನ್ನು ಬೆಳಿಗ್ಗೆ 6 ರಿಂದ 7 ಗಂಟೆ ಹಾಗೂ ರಾತ್ರಿ 8 ರಿಂದ 10 ಗಂಟೆವರೆಗೆ ಸೀಮಿತಗೊಳಿಸಲಾಗಿದೆ. ಸಂಪೂರ್ಣ ನಿಷೇಧದ ಪರಿಣಾಮವಾಗಿ ಅಕ್ರಮ ಪಟಾಕಿಗಳ ಬಳಕೆ ಹೆಚ್ಚಾಗುತ್ತದೆ ಎಂದು ನ್ಯಾಯಾಲಯ ಗಮನಿಸಿ, ಪರಿಸರ ಹಾನಿ ತಪ್ಪಿಸಲು ಸಮತೋಲಿತ ವಿಧಾನವನ್ನು ಅನುಸರಿಸುವ ಅಗತ್ಯವಿದೆ ಎಂದು ಹೇಳಿದೆ.

ಪರವಾನಗಿ ಪಡೆದ ತಯಾರಕರು ಮಾತ್ರ ಹಸಿರು ಪಟಾಕಿಗಳನ್ನು ತಯಾರಿಸಲು ಅನುಮತಿ ನೀಡಲಾಗುತ್ತದೆ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ನ್ಯಾಯಾಲಯಕ್ಕೆ ತಿಳಿಸಿದರು. ಕೇಂದ್ರ ಸರ್ಕಾರವು ಎಲ್ಲಾ ಪಾಲುದಾರರೊಂದಿಗೆ ಸಮಾಲೋಚಿಸಿ ಸಮಗ್ರ ನೀತಿ ರೂಪಿಸುವಂತೆ ನ್ಯಾಯಾಲಯ ಸೂಚಿಸಿದೆ.

ಹಿಂದಿನ ಆದೇಶದಂತೆ ನಿಷೇಧ ಪಾಲನೆ ಮಾಡದಿದ್ದರೆ ನ್ಯಾಯಾಂಗ ನಿಂದನೆ ಕ್ರಮ ಕೈಗೊಳ್ಳಲಾಗುವುದೆಂದು ನ್ಯಾಯಾಲಯ ಎಚ್ಚರಿಸಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande