ಗೋವಾ ಮಾಜಿ ಮುಖ್ಯಮಂತ್ರಿ ರವಿ ನಾಯಕ್ ನಿಧನ
ಪಣಜಿ, 15 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಗೋವಾ ರಾಜ್ಯದ ಮಾಜಿ ಮುಖ್ಯಮಂತ್ರಿ ರವಿ ನಾಯಕ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 79 ವರ್ಷ ವಯಸ್ಸಾಗಿತ್ತು. ಮುಖ್ಯಮಂತ್ರಿ ಡಾ. ಪ್ರಮೋದ್ ಸಾವಂತ್ ಅವರು ರವಿ ನಾಯಕ್ ನಿಧನಕ್ಕೆ ತೀವ್ರ ದುಃಖ ವ್ಯಕ್ತಪಡಿಸಿದ್ದು, ನಾಯಕ್ ಅವರನ್ನು ಗೋವಾ ರಾಜಕೀ
Ravi naik


ಪಣಜಿ, 15 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಗೋವಾ ರಾಜ್ಯದ ಮಾಜಿ ಮುಖ್ಯಮಂತ್ರಿ ರವಿ ನಾಯಕ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 79 ವರ್ಷ ವಯಸ್ಸಾಗಿತ್ತು.

ಮುಖ್ಯಮಂತ್ರಿ ಡಾ. ಪ್ರಮೋದ್ ಸಾವಂತ್ ಅವರು ರವಿ ನಾಯಕ್ ನಿಧನಕ್ಕೆ ತೀವ್ರ ದುಃಖ ವ್ಯಕ್ತಪಡಿಸಿದ್ದು, ನಾಯಕ್ ಅವರನ್ನು ಗೋವಾ ರಾಜಕೀಯದ ದಿಗ್ಗಜ ಎಂದು ಬಣ್ಣಿಸಿದ್ದಾರೆ.

ಅವರ ದಶಕಗಳ ಸಮರ್ಪಿತ ಸೇವೆಯು ರಾಜ್ಯದ ಆಡಳಿತದ ಮೇಲೆ ಅಳಿಸಲಾಗದ ಗುರುತು ಬಿಟ್ಟಿದೆ. ನಾಯಕ್ ಅವರ ನಾಯಕತ್ವ, ವಿನಮ್ರತೆ ಮತ್ತು ಸಾರ್ವಜನಿಕ ಕಲ್ಯಾಣಕ್ಕೆ ನೀಡಿದ ಕೊಡುಗೆಯನ್ನು ಯಾವಾಗಲೂ ಸ್ಮರಣೀಯ ಎಂದು ಡಾ. ಸಾವಂತ್ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಅವರ ಕುಟುಂಬ, ಸ್ನೇಹಿತರು ಮತ್ತು ಬೆಂಬಲಿಗರಿಗೆ ಸಂತಾಪ ಸೂಚಿಸಿದ್ದಾರೆ. ರವಿ ನಾಯಕ್ ತಮ್ಮ ರಾಜಕೀಯ ಜೀವನದಲ್ಲಿ ಮುಖ್ಯಮಂತ್ರಿ, ಸಂಪುಟ ಸಚಿವ ಸೇರಿದಂತೆ ಹಲವಾರು ಪ್ರಮುಖ ಹುದ್ದೆಗಳನ್ನು ಅಲಂಕರಿಸಿದ್ದರು.

ಏತನ್ಮಧ್ಯೆ, ಗೋವಾ ಮಾಜಿ ಮುಖ್ಯಮಂತ್ರಿ ಮತ್ತು ರಾಜ್ಯ ಕ್ಯಾಬಿನೆಟ್ ಸಚಿವ ರವಿ ನಾಯಕ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ದುಃಖ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ, ಗೋವಾದ ಅಭಿವೃದ್ಧಿ ಪಥವನ್ನು ಶ್ರೀಮಂತಗೊಳಿಸಿದ ಅನುಭವಿ ಆಡಳಿತಗಾರ ಮತ್ತು ಸಮರ್ಪಿತ ಸಾರ್ವಜನಿಕ ಸೇವಕರಾಗಿ ನಾಯಕ್ ಅವರನ್ನು ಸ್ಮರಿಸಲಾಗುವುದು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande