ಬೆಂಗಳೂರು, 15 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಬಂಗಾಳ ಉಪಮಹಾಸಾಗರದಲ್ಲಿ ನೈರುತ್ಯ ಮಳೆಯ ಮಾರುತ ಚುರುಕುಗೊಂಡಿರುವ ಹಿನ್ನೆಲೆಯಲ್ಲಿ, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಅಕ್ಟೋಬರ್ 18ರವರೆಗೆ ರಾಜ್ಯದ ಹಲವು ಭಾಗಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಹಿನ್ನೆಲೆಯಲ್ಲಿ, ಎಲ್ಲಾ ಜಿಲ್ಲೆಗಳಿಗೆ ಇಂದು ಹಳದಿ ಎಚ್ಚರಿಕೆ ಘೋಷಿಸಲಾಗಿದೆ. ಹವಾಮಾನ ಇಲಾಖೆ ಪ್ರಕಾರ, ಬೆಂಗಳೂರಿನಲ್ಲಿಯೂ ಇಂದು ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆಯಿದ್ದು, ರಾಜಧಾನಿಗೂ ಹಳದಿ ಎಚ್ಚರಿಕೆ ನೀಡಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa