ನಾಳೆ ವಿಜಯಪುರ ನಗರದಲ್ಲಿ ಮದ್ಯ ಮಾರಾಟ ನಿಷೇಧ
ವಿಜಯಪುರ, 15 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಬಂದ್ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ವಿಜಯಪುರ ನಗರದಲ್ಲಿ ನಾಳೆ ಬೆಳಿಗ್ಗೆ 6 ಗಂಟೆಯಿಂದ ಮಧ್ಯರಾತ್ರಿಯವರೆಗೆ ಎಲ್ಲಾ ಮದ್ಯ ಮಾರಾಟ ಮತ್ತು ಮದ್ಯ ತಯಾರಿಕಾ ಘಟಕಗಳನ್ನು ಅದರ ಮಾಲೀಕರು, ಅಧಿಬೋಗದಾರ
ನಾಳೆ ವಿಜಯಪುರ ನಗರದಲ್ಲಿ ಮದ್ಯ ಮಾರಾಟ ನಿಷೇಧ


ವಿಜಯಪುರ, 15 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಬಂದ್ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ವಿಜಯಪುರ ನಗರದಲ್ಲಿ ನಾಳೆ ಬೆಳಿಗ್ಗೆ 6 ಗಂಟೆಯಿಂದ ಮಧ್ಯರಾತ್ರಿಯವರೆಗೆ ಎಲ್ಲಾ ಮದ್ಯ ಮಾರಾಟ ಮತ್ತು ಮದ್ಯ ತಯಾರಿಕಾ ಘಟಕಗಳನ್ನು ಅದರ ಮಾಲೀಕರು, ಅಧಿಬೋಗದಾರರು ಮದ್ಯ ಸಂಗ್ರಹಿಸುವುದು ಮತ್ತು ಮಾರಾಟ ಮಾಡುವುದನ್ನು ನಿಷೇಧಿಸಿ,ಜಿಲ್ಲಾ ದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಆದೇಶ ಹೊರಡಿಸಿದ್ದಾರೆ.

ನಾಳೆ ವಿಜಯಪುರ ಬಂದ್ ಹಾಗೂ ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿರುವ ಹಿನ್ನಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ, ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಮುನ್ನೆಚ್ಚರಿಕೆ ಕ್ರಮವಾಗಿ ವಿಜಯಪುರ ನಗರ ವ್ಯಾಪ್ತಿಯಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಿ ಅವರು ಆದೇಶಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande