ಮತದಾರರಿಗೆ ಪ್ರಚೋದನೆ ನೀಡುವವರ ವಿರುದ್ಧ ಕಠಿಣ ಕ್ರಮ: ಚುನಾವಣಾ ಆಯೋಗದ ಎಚ್ಚರಿಕೆ
ನವದೆಹಲಿ, 15 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಬಿಹಾರ ವಿಧಾನ ಸಭಾ ಚುನಾವಣೆ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ನಡೆಯಲಿರುವ ಉಪಚುನಾವಣೆಗಳ ಹಿನ್ನೆಲೆಯಲ್ಲಿ ಮತದಾರರಿಗೆ ಹಣ, ಮದ್ಯ, ಉಡುಗೊರೆಗಳು ಅಥವಾ ಮಾದಕ ವಸ್ತುಗಳ ಮೂಲಕ ಪ್ರಭಾವ ಬೀರಲು ಪ್ರಯತ್ನಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಚುನ
EC


ನವದೆಹಲಿ, 15 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಬಿಹಾರ ವಿಧಾನ ಸಭಾ ಚುನಾವಣೆ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ನಡೆಯಲಿರುವ ಉಪಚುನಾವಣೆಗಳ ಹಿನ್ನೆಲೆಯಲ್ಲಿ ಮತದಾರರಿಗೆ ಹಣ, ಮದ್ಯ, ಉಡುಗೊರೆಗಳು ಅಥವಾ ಮಾದಕ ವಸ್ತುಗಳ ಮೂಲಕ ಪ್ರಭಾವ ಬೀರಲು ಪ್ರಯತ್ನಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಚುನಾವಣಾ ಆಯೋಗವು ಎಚ್ಚರಿಸಿದೆ.

ಈ ಕುರಿತು ಆಯೋಗವು ಪೊಲೀಸ್, ಅಬಕಾರಿ, ಆದಾಯ ತೆರಿಗೆ, ಜಾರಿ ನಿರ್ದೇಶನಾಲಯ, ಎನ್‌ಸಿಬಿ, ಕಸ್ಟಮ್ಸ್, ಆರ್‌ಬಿಐ, ರೈಲ್ವೆ ಹಾಗೂ ವಿಮಾನ ನಿಲ್ದಾಣ ಭದ್ರತಾ ಸಂಸ್ಥೆಗಳು ಸೇರಿದಂತೆ ಅನೇಕ ಇಲಾಖೆಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಚುನಾವಣಾ ಪ್ರಕ್ರಿಯೆ ಪಾರದರ್ಶಕವಾಗಿರಲು ಖರ್ಚು ವೀಕ್ಷಕರು ಹಾಗೂ ಫ್ಲೈಯಿಂಗ್ ಸ್ಕ್ವಾಡ್‌ಗಳನ್ನು ನೇಮಿಸಲಾಗಿದೆ.

ವಶಪಡಿಸಿಕೊಳ್ಳುವಿಕೆ ಪಾರದರ್ಶಕವಾಗಿರಲು “ಚುನಾವಣಾ ವಶಪಡಿಸಿಕೊಳ್ಳುವ ನಿರ್ವಹಣಾ ವ್ಯವಸ್ಥೆ” (ESMS) ಎಂಬ ಆನ್‌ಲೈನ್ ವ್ಯವಸ್ಥೆಯನ್ನು ಆರಂಭಿಸಲಾಗಿದೆ. ಅಕ್ಟೋಬರ್ 6ರಿಂದ ಇದುವರೆಗೆ ವಿವಿಧ ಜಾರಿ ಸಂಸ್ಥೆಗಳು ಒಟ್ಟು ₹33.97 ಕೋಟಿ ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಹಾಗೂ ಉಚಿತ ವಸ್ತುಗಳನ್ನು ವಶಪಡಿಸಿಕೊಂಡಿವೆ ಎಂದು ಆಯೋಗ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande