ಪೊಲೀಸ್ ಕಸ್ಟಡಿಯಲ್ಲಿ ಅಪ್ರಾಪ್ತನಿಗೆ ಚಿತ್ರಹಿಂಸೆ ; ತನಿಖೆಗೆ ಮುಂದಾದ ಎನ್‌ಎಚ್‌ಆರ್‌ಸಿ
ನವದೆಹಲಿ, 15 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಗುಜರಾತ್‌ನ ರಾಜ್‌ಕೋಟ್ ಜಿಲ್ಲೆಯ ಗಾಂಧಿಗ್ರಾಮ ಪೊಲೀಸ್ ಠಾಣೆಯಲ್ಲಿ 17 ವರ್ಷದ ಅಪ್ರಾಪ್ತ ಬಾಲಕನಿಗೆ ಪೊಲೀಸ್ ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಬಗ್ಗೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕ
Nhrc


ನವದೆಹಲಿ, 15 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಗುಜರಾತ್‌ನ ರಾಜ್‌ಕೋಟ್ ಜಿಲ್ಲೆಯ ಗಾಂಧಿಗ್ರಾಮ ಪೊಲೀಸ್ ಠಾಣೆಯಲ್ಲಿ 17 ವರ್ಷದ ಅಪ್ರಾಪ್ತ ಬಾಲಕನಿಗೆ ಪೊಲೀಸ್ ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಬಗ್ಗೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಂಡಿದೆ.

ಆಯೋಗವು ಗುಜರಾತ್ ಪೊಲೀಸ್ ಮಹಾನಿರ್ದೇಶಕರಿಗೆ ಎರಡು ವಾರಗಳಲ್ಲಿ ವಿವರವಾದ ವರದಿ ಸಲ್ಲಿಸಲು ನೋಟಿಸ್ ನೀಡಿದೆ. ಸೆಪ್ಟೆಂಬರ್ 1 ರಂದು ನಡೆದ ಇರಿತ ಪ್ರಕರಣದಲ್ಲಿ ಬಂಧಿತನಾದ ಬಾಲಕನಿಗೆ ಹಿಂಸೆ ನೀಡಿದ ವೀಡಿಯೊ ಅಕ್ಟೋಬರ್ 6 ರಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

ವೀಡಿಯೊದಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ಬಾಲಕನ ಕೂದಲನ್ನು ಎಳೆಯುತ್ತಿರುವುದು ಹಾಗೂ ಇತರರು ನಗುತ್ತಿರುವುದು ಕಾಣಿಸಿಕೊಂಡಿದೆ. ಈ ಘಟನೆ ಮಾನವ ಹಕ್ಕುಗಳ ಗಂಭೀರ ಉಲ್ಲಂಘನೆಯಾಗಿದೆ ಎಂದು ಎನ್‌ಎಚ್‌ಆರ್‌ಸಿ ಹೇಳಿದ್ದು, ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande