ಕನ್ಹೇರಿ ಶ್ರೀಗಳಿಗೆ ವಿಜಯಪುರ ಜಿಲ್ಲೆ ಪ್ರವೇಶಿಸದಂತೆ ಜಿಲ್ಲಾಡಳಿತದಿಂದ ನಿರ್ಬಂಧ
ವಿಜಯಪುರ, 16 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಇತ್ತೀಚೆಗೆ ಸಮಾರಂಭವೊಂದರಲ್ಲಿ ಕನೇರಿಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಅವರು ಬಸವ ಸಂಸ್ಕೃತಿ ಅಭಿಯಾನದ ಬಗ್ಗೆ ಹಾಗೂ ಲಿಂಗಾಯತ ಮಠಾಧೀಪತಿಗಳ‌ ಬಗ್ಗೆ ಅಶ್ಲೀಲ ಪದ ಬಳಸಿ ಅವಹೇಳನಕಾರಿ ಹಾಗೂ ಧಾರ್ಮಿಕ ಭಾವನೆಗೆ ಧಕ್ಕೆ ತರುವಂತೆ ಮಾತನಾಡಿದ್ದು, ರಾಜ್
ಕನ್ಹೇರಿ ಶ್ರೀಗಳಿಗೆ ವಿಜಯಪುರ ಜಿಲ್ಲೆ ಪ್ರವೇಶಿಸದಂತೆ ಜಿಲ್ಲಾಡಳಿತದಿಂದ ನಿರ್ಬಂಧ


ವಿಜಯಪುರ, 16 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಇತ್ತೀಚೆಗೆ ಸಮಾರಂಭವೊಂದರಲ್ಲಿ ಕನೇರಿಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಅವರು ಬಸವ ಸಂಸ್ಕೃತಿ ಅಭಿಯಾನದ ಬಗ್ಗೆ ಹಾಗೂ ಲಿಂಗಾಯತ ಮಠಾಧೀಪತಿಗಳ‌ ಬಗ್ಗೆ ಅಶ್ಲೀಲ ಪದ ಬಳಸಿ ಅವಹೇಳನಕಾರಿ ಹಾಗೂ ಧಾರ್ಮಿಕ ಭಾವನೆಗೆ ಧಕ್ಕೆ ತರುವಂತೆ ಮಾತನಾಡಿದ್ದು, ರಾಜ್ಯದೆಲ್ಲಡೆ ಪ್ರತಿಭಟನೆಗಳು, ತೀವ್ರ ಆಕ್ರೋಶಕ್ಕೆ ಕಾರಣವಾಗಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಅ.16 ರಿಂದ‌ ಡಿ.14 ರವರೆಗೆ ಎರಡು ತಿಂಗಳ‌ ಕಾಲ ಕನ್ಹೇರಿ ಸ್ವಾಮೀಜಿಗಳಿಗೆ ಬಸವನಬಾಗೇವಾಡಿ ಸೇರಿ ವಿಜಯಪುರ ಜಿಲ್ಲೆ‌ ಪ್ರವೇಶಿಸದಂತೆ ನಿರ್ಬಂಧ ವಿಧಿಸಿದೆ.

ಮಹಾರಾಷ್ಟ್ರ ರಾಜ್ಯದ ಜತ್ತ ಜಿಲ್ಲೆಯ ಬೀಳೂರಿನಲ್ಲಿ ಇತ್ತಿಚೆಗೆ ಜರುಗಿದ ಸಮಾರಂಭದಲ್ಲಿ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಅವರು, ಲಿಂಗಾಯತ ಮಠಾಧೀಪತಿಗಳ ಒಕ್ಕೂಟದಿಂದ ರಾಜ್ಯದಲ್ಲಿ ಹಮ್ಮಿಕೊಂಡಿದ್ದ ಬಸವ ಸಂಸ್ಕೃತಿ‌ ಅಭಿಯಾನದ ಬಗ್ಗೆ ಹಾಗೂ ಅಭಿಯಾನದ ನೇತೃತ್ವವಹಿಸಿದ್ದ ಮಠಾಧೀಶರ ಬಗ್ಗೆ ಅವಾಚ್ಯ ಶಬ್ದ ಬಳಕೆ ಮಾಡಿ ಅವಹೇಳನಕಾರಿಯಾಗಿ ಮಾತನಾಡಿದ್ದರು. ಇದಕ್ಕೆ ವಿಜಯಪುರ, ಬಸವಕಲ್ಯಾಣ, ಕೂಡಲಸಂಗಮ, ಬೆಳಗಾವಿ, ದಾವಣಗೆರೆ, ಬೀದರ, ಗದಗ ಹೀಗೆ ರಾಜ್ಯದ ವಿವಿಧ ಭಾಗಗಳಲ್ಲಿ ಕನ್ಹೇರಿ ಸ್ವಾಮೀಜಿಗಳ ವಿರುದ್ಧ ಪ್ರತಿಭಟನೆಗಳು ನಡೆಸಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.

ಅಲ್ಲದೇ, ಅ.16 ಮತ್ತು 17 ಎರಡು ದಿನಗಳ‌ ಕಾಲ ಬಸವನಬಾಗೇವಾಡಿ ಪಟ್ಟಣದ ಸಮರ್ಥ ಸದ್ಗುರು ಸಿದ್ದರಾಮೇಶ್ವರ ಮಹಾರಾಜರ ಪುಣ್ಯತಿಥಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕನ್ಹೇರಿ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿಗಳು ಆಗಮಿಸುವ ಮಾಹಿತಿ ಇದೆ. ಕನ್ಹೇರಿ ಸ್ವಾಮೀಜಿ‌‌ ಭೇಟಿ ಸಂದರ್ಭದಲ್ಲಿ ಕಾರ್ಯಕ್ರಮಕ್ಕೆ ಅಡ್ಡಿಪಡಿಸುವ, ಕಾನೂನು ಸುವ್ಯವಸ್ಥೆಗೆ ಧಕ್ಕೆಯುಂಟಾಗುವ ಸಾಧ್ಯತೆ ಇರುವ ಕಾರಣ ಕನ್ಹೇರಿ ಸ್ವಾಮೀಜಿ ಅವರಿಗೆ ಬಸವನಬಾಗೇವಾಡಿ ಹಾಗೂ ವಿಜಯಪುರ ಜಿಲ್ಲೆ ಪ್ರವೇಶಿಸದಂತೆ ಕನಿಷ್ಠ ಎರಡು ತಿಂಗಳ ಕಾಲ ನಿರ್ಬಂಧ ವಿಧಿಸುವಂತೆ ಪೊಲೀಸ್ ಇಲಾಖೆ ವರದಿ ಮನವಿ ಮೇರೆಗೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಕನ್ಹೇರಿ‌ ಸ್ವಾಮೀಜಿಯವರಿಗೆ ಅ.16 ರಿಂದ ಡಿ. 14 ರವರೆಗೆ ಬಸವನಬಾಗೇವಾಡಿ ಹಾಗೂ ವಿಜಯಪುರ ಜಿಲ್ಲೆ ಪ್ರವೇಶಿಸದಂತೆ ನಿರ್ಬಂಧ ವಿಧಿಸಿ ಬುಧವಾರ ಆದೇಶ ಹೊರಡಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande