ವಿಜಯಪುರ, 16 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ನಿಮಿತ್ತ ಕಿತ್ತೂರು ರಾಣಿ ಚೆನ್ನಮ್ಮ ವಿಜಯಜ್ಯೋತಿ ಯಾತ್ರೆಯು ಜಿಲ್ಲೆಗೆ ಬುಧವರ ಆಗಮಿಸಿತು ವಿಜಯಪುರಕ್ಕೆ ಆಗಮಿಸಿದ ವಿಜಯ ಜ್ಯೋತಿ ಯಾತ್ರೆಯ ರಥಕ್ಕೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಗುರುವಾರ ಜಿಲ್ಲಾಧಿಕಾರಿ ಡಾ. ಆನಂದ ಕೆ ಹಾಗೂ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಿಷಿ ಆನಂದ ಅವರು ಪೂಜೆ ಸಲ್ಲಿಸಿ ಕಿತ್ತೂರ ರಾಣಿ ಚನ್ನಮ್ಮ ಪ್ರತಿಮೆಗೆ ಪುಷ್ಪಾರ್ಚನೆ ನೆರವೇರಿಸಿದರು.
ವೀರ ರಾಣಿ ಚನ್ನಮ್ಮ ಅವರ ಧೈರ್ಯ, ಶೌರ್ಯ ಮತ್ತು ಹೋರಾಟದ ಸ್ಫೂರ್ತಿಯನ್ನು ವಿಜಯ ಜ್ಯೋತಿ ಯಾತ್ರೆ ಮೂಲಕ ಜನರಿಗೆ ತಿಳಿಸಿಕೊಡುವುದಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಆನಂದ ಕೆ ಹೇಳಿದರು.
ವಿಜಯ ಜ್ಯೋತಿ ಯಾತ್ರೆಯ ಮೆರವಣಿಗೆಯು ಜಾನಪದ ಕಲಾ ತಂಡಗಳಿ0ದ ಜಿಲ್ಲಾಧಿಕಾರಿ ಕಚೇರಿಯಿಂದ ಆರಂಭಗೊ0ಡು ನಗರದ ಪ್ರಮುಖ ರಸ್ತೆಗಳಲ್ಲಿ ಸಾಗಿತು.
ಬಾಗಲಕೋಟೆ ಜಿಲ್ಲೆಯಿಂದ ವಿಜಯಪುರಕ್ಕೆ ಆಗಮಿಸಿದ ರಥ ಯಾತ್ರೆ ಬೆಳಗಾವಿ ಜಿಲ್ಲೆಯ ಅಥಣಿಗೆ ಬೀಳ್ಕೊಡಲಾಯಿತು.
ಬೆಳಗಾವಿ ಕಿತ್ತೂರಿನಲ್ಲಿ ಅಕ್ಟೋಬರ್ 23 ರಿಂದ 25ರವರೆಗೆ ನಡೆಯಲಿರುವ ಕಿತ್ತೂರ ಉತ್ಸವ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಸಂಚಿಸುವ ಈ ವಿಜಯ ಜ್ಯೋತಿ ಯಾತ್ರೆ ಜಿಲ್ಲೆಯಿಂದ ಬೆಳಗಾವಿ ಜಿಲ್ಲೆಗೆ ಬೀಳ್ಕೊಡಲಾಯಿತು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮನಗೌಡ ಹಟ್ಟಿ, ಡಿವೈಎಸ್‌ಪಿ ಬಸವರಾಜ್ ಯಲಿಗಾರ, ನಗರದ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎಸ್.ಜೆ.ಬಿರಾದಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಂತೋಷ ಭೋವಿ, ಶಿಕ್ಷಣ ಇಲಾಖೆಯ ವಿಷಯ ಪರಿವೀಕ್ಷಕರಾದ ಶಿವಾನಂದ ಬ್ಯಾಹಟ್ಟಿ, ಬಿ.ಎಮ್ ಪಾಟೀ¯,ಗುರುಶಾಂತ ನಿಡೋಣ,ಎಸ್.ವಿ.ಪಾಟೀಲ,ನಿಂಗನಗೌಡ ಸೋಲಾಪೂರ,ಸುರೇಶ ಬಿರಾದಾರಮ ಸಂಜುಗೌಡ ಪಾಟೀಲ, ಶ್ರೀಶೈಲ ಮುಳಜಿ, ಶೋಭಾ ಬಿರಾದಾರ, ಸಿದ್ಧನಗೌಡ ಪೊಲೀಸ್ ಪಾಟೀಲ,ನಿಂಗಪ್ಪ ಸಂಗಾಪೂರ,ಬಸನಗೌಡ ಬಿರಾದಾರ ಸೇರಿದಂತೆ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / jyothi deshpande