ಕನ್ಹೇರಿ ಸ್ವಾಮಿಜಿ ವಿರುದ್ಧ ಬೃಹತ್ ಪ್ರತಿಭಟನೆ
ವಿಜಯಪುರ, 16 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಮಹಾರಾಷ್ಟ್ರದ ಕೊಲ್ಹಾಪುರ ಕನ್ನೇರಿ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಿದರು. ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಬಸವ ಭಕ್ತರು, ಅಭಿಮಾನಿಗಳು, ಮಠಾಧೀಶರು ಆಕ್ರೋಶ ವ್ಯಕ್ತಪಡಿಸಿದರು
ಸ್ವಾಮೀಜಿ


ವಿಜಯಪುರ, 16 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಮಹಾರಾಷ್ಟ್ರದ ಕೊಲ್ಹಾಪುರ ಕನ್ನೇರಿ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಿದರು.

ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಬಸವ ಭಕ್ತರು, ಅಭಿಮಾನಿಗಳು, ಮಠಾಧೀಶರು ಆಕ್ರೋಶ ವ್ಯಕ್ತಪಡಿಸಿದರು.

ಮಹಾರಾಷ್ಟ್ರದ ಕೊಲ್ಹಾಪುರದ ಕನ್ನೇರಿ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮಿಜಿ, ಸಿದ್ದರಾಮಯ್ಯ ಹಾಗೂ ಲಿಂಗಾಯತ ಮಠಗಳ ಒಕ್ಕೂಟಕ್ಕೆ ಹಿಗ್ಗಾ, ಮುಗ್ಗಾ ಜರಿದಿದ್ದರು. ಇದರ ಬೆನ್ನಲ್ಲೆ ವಿಜಯಪುರ ಜಿಲ್ಲೆಯ ಪ್ರವೇಶಕ್ಕೆ ಜಿಲ್ಲಾಧಿಕಾರಿ ನಿರ್ಬಂಧ ಹೇರಿದ್ದರು.

ಇಂದು ಬಸವನಾಡಿನ ಬಸವ ಭಕ್ತರು, ಅಭಿಮಾನಿಗಳಿಂದ ಬೃಹತ್ ಪ್ರತಿಭಟನೆ ನಡೆಸಿ, ಕಾಡಸಿದ್ದೇಶ್ವರ ಸ್ವಾಮಿಜಿ ಭಾವಚಿತ್ರಕ್ಕೆ ಚಪ್ಪಲಿ ಏಟು ನೀಡಿ ಬೆಂಕಿ ಹಚ್ಚಿ ಕಿಡಿಕಾರಿದರು. ಅದಕ್ಕಾಗಿ ತಕ್ಷಣವೇ ಬಸವ ಭಕ್ತರಿಗೆ ಕ್ಷಮೆ ಕೇಳುವಂತೆ ಒತ್ತಾಯಿಸಿದರು. ‌ಇದಕ್ಕೂ ಮೊದಲು ಬಸವನ ಬಾಗೇವಾಡಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪಾದಯಾತ್ರೆ ಮೂಲಕ ಸ್ವಾಮೀಜಿ ವಿರುದ್ಧ ಕಿಡಿಕಾರಿದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande