ಪ್ರಧಾನಿ ಮೋದಿ ಮತ್ತು ಶ್ರೀಲಂಕಾ ಪ್ರಧಾನಿ ಹರಿಣಿ ನಡುವೆ ಉನ್ನತ ಮಟ್ಟದ ಚರ್ಚೆ
ನವದೆಹಲಿ, 17 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಶ್ರೀಲಂಕಾ ಪ್ರಧಾನಿ ಡಾ. ಹರಿಣಿ ಅಮರಸೂರ್ಯ ಅವರು ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು. ಈ ಭೇಟಿಯು ಭಾರತ-ಶ್ರೀಲಂಕಾ ನಡುವಿನ ಐತಿಹಾಸಿಕ ಮತ್ತು ಬಹುಮುಖಿ ಸಂಬಂಧಗಳಿಗೆ ಹೊಸ ಪ್ರಚೋದನೆಯನ್ನು ನೀಡಲಿದೆ ಎಂದು ಪ್ರ
Meeting


ನವದೆಹಲಿ, 17 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಶ್ರೀಲಂಕಾ ಪ್ರಧಾನಿ ಡಾ. ಹರಿಣಿ ಅಮರಸೂರ್ಯ ಅವರು ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು. ಈ ಭೇಟಿಯು ಭಾರತ-ಶ್ರೀಲಂಕಾ ನಡುವಿನ ಐತಿಹಾಸಿಕ ಮತ್ತು ಬಹುಮುಖಿ ಸಂಬಂಧಗಳಿಗೆ ಹೊಸ ಪ್ರಚೋದನೆಯನ್ನು ನೀಡಲಿದೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.

ಭೇಟಿಯ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ಈ ವರ್ಷದ ಏಪ್ರಿಲ್‌ನಲ್ಲಿ ನಡೆದ ತಮ್ಮ ಶ್ರೀಲಂಕಾ ಭೇಟಿಯನ್ನು ನೆನಪಿಸಿಕೊಂಡು, ಆ ವೇಳೆಯಲ್ಲಿ ಅಧ್ಯಕ್ಷ ಅನುರ ಕುಮಾರ ದಿಸಾನಾಯಕೆ ಅವರೊಂದಿಗೆ ಸಹಕಾರದ ಕ್ಷೇತ್ರಗಳಲ್ಲಿ ಉಪಯುಕ್ತ ಚರ್ಚೆಗಳು ನಡೆದಿದ್ದವು ಎಂದು ಹೇಳಿದರು.

ಇಂದು ನಡೆದ ಚರ್ಚೆಯ ವೇಳೆ ಇಬ್ಬರು ನಾಯಕರೂ ಶಿಕ್ಷಣ, ತಂತ್ರಜ್ಞಾನ, ನಾವೀನ್ಯತೆ, ಅಭಿವೃದ್ಧಿ ಸಹಕಾರ ಹಾಗೂ ಮೀನುಗಾರರ ಕಲ್ಯಾಣ ಸೇರಿದಂತೆ ಹಲವು ಪ್ರಮುಖ ಕ್ಷೇತ್ರಗಳಲ್ಲಿ ಸಹಕಾರವನ್ನು ಬಲಪಡಿಸುವ ಕುರಿತು ಚರ್ಚೆ ನಡೆಸಿದರು.

ಪ್ರಧಾನಿ ಮೋದಿ ಅವರು ಭಾರತ ಮತ್ತು ಶ್ರೀಲಂಕಾ ನಡುವಿನ ವಿಶೇಷ ಸ್ನೇಹ ಸಂಬಂಧವನ್ನು ಉಲ್ಲೇಖಿಸಿ, ಎರಡೂ ದೇಶಗಳ ಹಂಚಿಕೆಯ ಅಭಿವೃದ್ಧಿ ಪ್ರಯಾಣದಲ್ಲಿ ಒಟ್ಟಾಗಿ ಕೆಲಸ ಮಾಡುವ ಭಾರತದ ಬದ್ಧತೆಯನ್ನು ಪುನರುಚ್ಚರಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande