ಹೊಸಪೇಟೆ, 17 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ನಗರದ ಉಪವಿಭಾಗ-1 ಮತ್ತು 2 ರ ಗ್ರಾಹಕರ ಕುಂದು ಕೊರತೆ ವಿದ್ಯುತ್ ಸಮ್ಯಸೆಗಳನ್ನು ಪರಿಹರಿಸಲು ನಾಳೆ ಮಧ್ಯಾಹ್ನ. 4 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ನಗರದ ಉಪವಿಭಾಗ-1 ರ ಕಚೇರಿಯಲ್ಲಿ ಗ್ರಾಹಕರ ಸಂವಾದ ಸಭೆಯನ್ನು ಹಮ್ಮಿಕೊಳ್ಳಲಾಗಿದೆ.
ನಗರ ವ್ಯಾಪ್ತಿಯಲ್ಲಿನ ಜೆಸ್ಕಾಂ ಗ್ರಾಹಕರು ಮತ್ತು ಸಾರ್ವಜನಿಕರು ಸಭೆಗೆ ಭಾಗವಹಿಸಿ ತಮ್ಮ ಕುಂದು ಕೊರತೆಗಳನ್ನು ಅಹವಾಲು ಸಲ್ಲಿಸಿ ಬಗೆಹರಿಸಿಕೊಳ್ಳಬೇಕೆಂದು ಕಾರ್ಯ ಮತ್ತು ಪಾಲನಾ ಉಪವಿಭಾಗ-1 ಮತ್ತು 2 ರ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್