ವಿಜಯಪುರ, 17 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಸಾರ್ವಜನಿಕ ಸ್ಥಳಗಳಲ್ಲಿ, ಸರ್ಕಾರಿ ಜಾಗಗಳಲ್ಲಿ ನಮಾಜ್ ಮಾಡಲು ಅವಕಾಶ ನೀಡಬಾರದು ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದಿದ್ದಾರೆ.
'ಸರ್ವ ಜನಾಂಗದ ಶಾಂತಿಯ ತೋಟ' ಎಂಬ ಸರ್ಕಾರದ ಆಶಯ ಎಲ್ಲರಿಗೂ ಅನ್ವಯ ಆಗಬೇಕು. ಈ ನಿಟ್ಟಿನಲ್ಲಿ ಸರ್ಕಾರ ಕೂಡಲೇ ಅಗತ್ಯ ಕ್ರಮಕೈಗೊಳ್ಳಲಿ ಎಂದು ಆಗ್ರಹಿಸಿದ್ದಾರೆ.
ಸರ್ಕಾರವೇ ಪರಿಚಯಿಸಿರುವ ನಿಯಮಾವಳಿಗಳ ಅನುಸಾರ ಸಾರ್ವಜನಿಕ ಸ್ಥಳಗಳಲ್ಲಿ, ಸರ್ಕಾರಿ ಜಾಗಗಳಲ್ಲಿ ನಮಾಜ್ ಮಾಡಲು ಅವಕಾಶ ಕೊಡಬಾರದೆಂದು ಮುಖ್ಯಮಂತ್ರಿಗಳಿಗೆ ಸವಿವರವಾಗಿ ಪತ್ರ ಬರೆದಿದ್ದೇನೆ ಎಂದು ಯತ್ನಾಳ ತಿಳಿಸಿದ್ದಾರೆ.
ರಸ್ತೆಗಳು, ಬಸ್ ನಿಲ್ದಾಣ, ಪಾದಚಾರಿ ಮಾರ್ಗಗಳಲ್ಲಿ ಸೇರಿದಂತೆ ಅನೇಕ ಸಾರ್ವಜನಿಕ ಸ್ಥಳಗಳಲ್ಲಿ ನಮಾಜ್ ಮಾಡುವುದನ್ನು ನೋಡುತ್ತಿದ್ದೇವೆ. ಸರ್ಕಾರಿ ಜಾಗಗಳಲ್ಲಿ ಖಾಸಗಿ ಸಂಘಸಂಸ್ಥೆಗಳ ಚಟುವಟಿಕೆಗಳನ್ನು ನಿರ್ಬಂಧಿಸಿದಂತೆ ನಮಾಜ್ ಮಾಡುವುದನ್ನೂ ನಿಷೇಧಿಸಬೇಕು. ಹಾಗೇ ಮಾಡಿದಾಗಲೇ ನೀವು ನಿಜವಾದ ಜಾತ್ಯಾತೀತ ಎಂದು ಸಿಎಂ ಅವರಿಗೆ ಯತ್ನಾಳ ಆಗ್ರಹಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / jyothi deshpande