ಬಿಹಾರ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟಕ್ಕೆ ಗೆಲುವು : ಸಿದ್ದರಾಮಯ್ಯ ವಿಶ್ವಾಸ
ಮೈಸೂರು, 17 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಬಿಹಾರ ರಾಜ್ಯದ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟ ಗೆಲ್ಲಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು. ಅವರು ಇಂದು ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಜನ ಬದಲಾವಣೆ ಬಯಸುತ್ತಿದ್ದಾರೆ. ಬದಲಾವಣೆ ಆಗ
Cm


ಮೈಸೂರು, 17 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಬಿಹಾರ ರಾಜ್ಯದ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟ ಗೆಲ್ಲಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.

ಅವರು ಇಂದು ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ,

ಜನ ಬದಲಾವಣೆ ಬಯಸುತ್ತಿದ್ದಾರೆ. ಬದಲಾವಣೆ ಆಗುತ್ತದೆ ಎಂಬ ನಂಬಿಕೆ ಇದೆ ಎಂದು ಅವರು ಹೇಳಿದರು. ರಾಹುಲ್ ಗಾಂಧಿಯವರ ಪಾದಯಾತ್ರೆಯ ಸಂದರ್ಭದಲ್ಲಿ ಜನರಿಂದ ಅಭೂತಪೂರ್ವ ಪ್ರತಿಕ್ರಿಯೆ ಲಭಿಸಿದ್ದು ಗೆಲುವು ನಮ್ಮದಾಗಲಿದೆ ಎಂದರು. ಪ್ರಚಾರಕ್ಕೆ ಕರೆದರೆ ಹೋಗುತ್ತೇನೆ ಎಂದು ಹೇಳಿದರು.

ಬಿಹಾರ ಚುನಾವಣೆಯ ಫಲಿತಾಂಶ ಕರ್ನಾಟಕ ರಾಜ್ಯದ ರಾಜಕಾರಣದ ಮೇಲೆ ಪರಿಣಾಮ ಬೀರಲಿದೆಯೇ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ ಯಾವ ರಾಜ್ಯದ ಫಲಿತಾಂಶವೂ ಯಾವ ರಾಜ್ಯದ ಮೇಲೂ ಪರಿಣಾಮ ಬೀರುವುದಿಲ್ಲ ಎಂದು ಅವರು ಅಭಿಪ್ರಾಯಪಟ್ಟರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande