ಕುಡಿಯಲು ಹಣ ಕೊಡಲಿಲ್ಲವೆಂದು ಹೆತ್ತ ತಾಯಿಯನ್ನೇ ಕೊಂದ ಮಗ
ವಿಜಯಪುರ, 17 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಮದ್ಯ ಸೇವಿಸಲು ಹಣ ನೀಡಲಿಲ್ಲ ಎಂದು ಹೆತ್ತ ತಾಯಿಯನ್ನೇ ಕೈಕಾಲು ಕಟ್ಟಿ ಬಾಯಿಗೆ ಬಟ್ಟೆ ತುರುಕಿ ಕತ್ತು ಕೊಯ್ದು ಕೊಲೆಗೈದಿರುವ ಘಟನೆ ಬಾಗಲಕೋಟೆ ತಾಲೂಕಿನ ತುಳಸಿಗೇರಿ ಗ್ರಾಮದಲ್ಲಿ ನಡೆದಿದೆ. 28 ವರ್ಷದ ವೆಂಕಟೇಶ್ ಗಿರಿಸಾಗರ ಎಂಬ ಪಾಪಿ ಮಗ ತನ್ನ ತಾಯಿ
ಹತ್ಯೆ


ವಿಜಯಪುರ, 17 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಮದ್ಯ ಸೇವಿಸಲು ಹಣ ನೀಡಲಿಲ್ಲ ಎಂದು ಹೆತ್ತ ತಾಯಿಯನ್ನೇ ಕೈಕಾಲು ಕಟ್ಟಿ ಬಾಯಿಗೆ ಬಟ್ಟೆ ತುರುಕಿ ಕತ್ತು ಕೊಯ್ದು ಕೊಲೆಗೈದಿರುವ ಘಟನೆ ಬಾಗಲಕೋಟೆ ತಾಲೂಕಿನ ತುಳಸಿಗೇರಿ ಗ್ರಾಮದಲ್ಲಿ ನಡೆದಿದೆ.

28 ವರ್ಷದ ವೆಂಕಟೇಶ್ ಗಿರಿಸಾಗರ ಎಂಬ ಪಾಪಿ ಮಗ ತನ್ನ ತಾಯಿ ಶಾವಕ್ಕ ಗಿರಿಸಾಗರ (58) ಅವರ ಕೈಕಾಲು ಕಟ್ಟಿ ಬಾಯಲ್ಲಿ ಬಟ್ಟೆ ತುರುಕಿ, ಕುತ್ತಿಗೆ ಕೊಯ್ದು ಕೊಲೆಗೈದರು ಪರಾರಿಯಾಗಿದ್ದಾನೆ.

ದಿನನಿತ್ಯ ಶಾವಕ್ಕ ಕಾಣಿಸದಿದ್ದಾಗ ಅಕ್ಕಪಕ್ಕದವರು ಇಣುಕಿ ನೋಡಿದ್ದಾರೆ. ರಕ್ತದ ಮಡುವಿನಲ್ಲಿ ಶವವಾಗಿ ಬಿದ್ದಿರುವುದು ಗೊತ್ತಾಗಿದೆ. ಕೂಡಲೇ ಕಲಾದಗಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ವೆಂಕಟೇಶನನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಕಲಾದಗಿ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande