ಮೈಸೂರು, 18 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಸಂಘ ಪರಿವಾರ ಮತ್ತು ಆರ್‌ಎಸ್‌ಎಸ್ ನವರು ಅಂಬೇಡ್ಕರ್ ಅವರ ಸಂವಿಧಾನವನ್ನು ವಿರೋಧಿಸಿದ್ದರು. ಈಗಲೂ ವಿರೋಧಿಸುತ್ತಿದ್ದಾರೆ. ಹೀಗಾಗಿ ಇವರ ಬಗ್ಗೆ ಎಚ್ಚರಿಕೆ ಇಂದ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆಕೊಟ್ಟರು.
ಮೈಸೂರು ವಿಶ್ವ ವಿದ್ಯಾಲಯದ ರಜತ ಮಹೋತ್ಸವ ಹಾಗೂ ನೂತನ ಜ್ಞಾನ ದರ್ಶನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು.
ಅಂಬೇಡ್ಕರ್ ಅವರು ತಮ್ಮ ಜ್ಞಾನವನ್ನು ಸಮಾಜದ ಬದಲಾವಣೆಗೆ ಬಳಸಿದ ಮಹಾನ್ ಚೇತನ. ಇವರು ಸಮಾಜವನ್ನು ಅರ್ಥ ಮಾಡಿಕೊಳ್ಳಲು ಜ್ಞಾನ ಸಂಪಾದನೆ ಮಾಡಿದರು. ಬಳಿಕ ತಮ್ಮ ಜ್ಞಾನವನ್ನು ಬದುಕಿನುದ್ದಕ್ಕೂ ಸಮಾಜದ ಬದಲಾವಣೆಗೆ ಬಳಸಿದರು ಎಂದು ಮೆಚ್ಚುಗೆ ಸೂಚಿಸಿದರು.
ಅಂಬೇಡ್ಕರ್ ಅವರ ಹೆಸರಲ್ಲಿ ಬಿಜೆಪಿಯವರು, ಸಂಘ ಪರಿವಾರದವರು ಅಪಪ್ರಚಾರ ಮಾಡುತ್ತಿದ್ದಾರೆ. ಅವರನ್ನು ಚುನಾವಣೆಯಲ್ಲಿ ಸೋಲಿಸಿದ್ದು ಕಾಂಗ್ರೆಸ್ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ಆದರೆ, ಸತ್ಯ ಏನೆಂದರೆ ನನ್ನನ್ನು ಚುನಾವಣೆಯಲ್ಲಿ ಸೋಲಿಸಿದ್ದು ಸಾವರ್ಕರ್ ಮತ್ತು ಡಾಂಗೆ ಎಂದು ಸ್ವತಃ ಅಂಬೇಡ್ಕರ್ ಅವರೇ ತಮ್ಮದೇ ಹಸ್ತಾಕ್ಷರದಲ್ಲಿ ಬರೆದಿದ್ದಾರೆ. ಇಂಥಾ ಸತ್ಯಗಳನ್ನು ಸಮಾಜದ ಮುಂದಿಟ್ಟು ಸಂಘ ಪರಿವಾರದ ಸುಳ್ಳುಗಳನ್ನು ಬಹಿರಂಗಗೊಳಿಸಬೇಕು ಎಂದು ಕರೆ ನೀಡಿದರು.
ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಅನ್ನು ನಾನು ಸ್ಥಾಪಿಸಿದ್ದು ಏಕೆಂದರೆ ಅವರನ್ನು ಓದಿಕೊಂಡವರು ಅವರ ಮಾರ್ಗದಲ್ಲಿ ನಡೆಯಲಿ ಉದ್ದೇಶದಿಂದ. ಅಂಬೇಡ್ಕರ್ ಅವರಿಗೆ ಅಂಬೇಡ್ಕರ್ ಅವರೇ ಸಾಟಿ. ಮತ್ತೊಬ್ಬ ಅಂಬೇಡ್ಕರ್ ಬರಲು ಸಾಧ್ಯವಿಲ್ಲ. ಆದರೆ ಪ್ರತಿಯೊಬ್ಬರೂ ಅವರ ಆದರ್ಶಗಳನ್ನು ಪಾಲಿಸಿ ಅವರ ಹಾದಿಯಲ್ಲಿ ನಡೆಯಬೇಕು ಎಂದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa