ನಕಲಿ ಜಾತಿ ಪ್ರಮಾಣ ಪತ್ರ ದೃಢ : ಕೋಲಾರದ ೭ ಪ್ರಕರಣಗಳಲ್ಲಿ ಕ್ರಮ
ನಕಲಿ ಜಾತಿ ಪ್ರಮಾಣ ಪತ್ರ ದೃಢ: ಕೋಲಾರದಲ್ಲಿ ೭ ಪ್ರಕರಣಗಳಲ್ಲಿ ಕ್ರಮ
ಚಿತ್ರ ; ಕೋಲಾರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ವಿವಿಧ ಸಭೆಗಳಲ್ಲಿ ಜಾತಿ ಪ್ರಮಾಣ ಪತ್ರಗಳ ಸಿಂಧುತ್ವದ ಕುರಿತು ವಿಚಾರಣೆ ನಡೆಸಲಾಯಿತು. ಆಗ್ನೇಯ ಪದವೀಧರರ ಕ್ಷೇತ್ರದ ಮತದಾರರ ನೋಂದಣಿ


ಕೋಲಾರ, 18 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ನಕಲಿ ಜಾತಿ ಪ್ರಮಾಣ ಪತ್ರಗಳ ಹಾವಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕೋಲಾರ ಜಿಲ್ಲಾ ಜಾತಿ ಪರಿಶೀಲನಾ ಸಮಿತಿಯು ಮಹತ್ವದ ತೀರ್ಮಾನಗಳನ್ನು ಕೈಗೊಂಡಿದೆ. ಜಿಲ್ಲಾಧಿಕಾರಿ ಡಾ. ಎಂ ಆರ್. ರವಿ ಅವರ ಅಧ್ಯಕ್ಷತೆಯಲ್ಲಿ ನಡೆದ ನಿರಂತರ ವಿಚಾರಣೆಗಳ ಫಲವಾಗಿ, ಒಟ್ಟು ೪೬ ಪ್ರಕರಣಗಳ ಪೈಕಿ ೭ ಪ್ರಕರಣಗಳಲ್ಲಿ ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದಿರುವುದು ಸ್ಪಷ್ಟವಾಗಿ ಸಾಬೀತಾಗಿದೆ.

ಕೋಲಾರ ಜಿಲ್ಲಾಧಿಕಾರಿಗಳು ಹಾಗೂ ಜಾತಿ ಪ್ರಮಾಣ ಸಿಂಧುತ್ವ ಸಮಿತಿಯ ಅಧ್ಯಕ್ಷರ ನೇತೃತ್ವದಲ್ಲಿ ಸಭೆಗಳಲ್ಲಿ ಜಾತಿ ಪ್ರಮಾಣ ಪತ್ರಗಳ ಸಿಂಧುತ್ವದ ಕುರಿತು ವಿಚಾರಣೆ ನಡೆಸಲಾಯಿತು.

ನಾಗರೀಕ ಹಕ್ಕು ಜಾರಿ ನಿರ್ದೇಶನಾಲಯದ ವರದಿ: ಬೆಂಗಳೂರಿನ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯವು ಕೋಲಾರ ಜಿಲ್ಲೆಗೆ ಸಂಬಂಧಿಸಿದ ೩೨ ಸುಳ್ಳು ಜಾತಿ ಪ್ರಕರಣಗಳನ್ನು ತನಿಖೆ ನಡೆಸಿ ಅಂತಿಮ ತೀರ್ಮಾನಕ್ಕಾಗಿ ಸಮಿತಿಗೆ ಕಳುಹಿಸಿತ್ತು. ಈ ೩೨ ಪ್ರಕರಣಗಳ ವಿಚಾರಣೆ ನಡೆಸಿದ ಸಮಿತಿಯು ಒಟ್ಟು ೧೭ ಪ್ರಕರಣಗಳಲ್ಲಿ ಅಂತಿಮ ನಿರ್ಧಾರ ಕೈಗೊಂಡಿದೆ.

೪ ಪ್ರಮಾಣ ಪತ್ರಗಳು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಸೇರಿರುವುದು ಸಾಬೀತಾಗಿದೆ.ವಿಚಾರಣೆ ಮುಕ್ತಾಯ: ೫ ಪ್ರಕರಣಗಳಲ್ಲಿ ಅಭ್ಯರ್ಥಿಗಳು ಈಗಾಗಲೇ ಸಿಂಧುತ್ವ ಪ್ರಮಾಣ ಪತ್ರಗಳನ್ನು ಪಡೆದಿದ್ದರಿಂದ ವಿಚಾರಣೆಯನ್ನು ಕೈಬಿಡಲಾಗಿದೆ. ಇನ್ನೊಂದು ಪ್ರಕರಣದ ಮುಕ್ತಾಯ: ೧ ಪ್ರಕರಣದಲ್ಲಿ ಅಭ್ಯರ್ಥಿ ಮೃತಪಟ್ಟಿರುವುದರಿಂದ ಅದನ್ನು ಮುಕ್ತಾಯಗೊಳಿಸಲಾಗಿದೆ.

ಸಮಿತಿಗೆ ನೇರವಾಗಿ ಬಂದ ದೂರುಗಳ ಸ್ಥಿತಿ ; ಜಿಲ್ಲಾ ಜಾತಿ ಪರಿಶೀಲನಾ ಸಮಿತಿಗೆ ನೇರವಾಗಿ ದಾಖಲಾಗಿದ್ದ ಒಟ್ಟು ೧೪ ಪ್ರಕರಣಗಳ ಸ್ಥಿತಿ :ತನಿಖೆಗೆ ಶಿಫಾರಸು: ೧೦ ಪ್ರಕರಣಗಳನ್ನು ತನಿಖೆ ನಡೆಸಿ ವರದಿ ನೀಡಲು ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಕೋಲಾರ ಘಟಕದ ಪೊಲೀಸ್ ಉಪಾಧೀಕ್ಷಕರಿಗೆ ಕಳುಹಿಸಲಾಗಿದೆ. ನ್ಯಾಯಾಲಯದ ತಡೆಯಾಜ್ಞೆ: ೨ ಪ್ರಕರಣಗಳಿಗೆ ಮಾನ್ಯ ಉಚ್ಚ ನ್ಯಾಯಾಲಯವು ವಿಚಾರಣೆಗೆ ತಡೆಯಾಜ್ಞೆ ನೀಡಿದೆ.

ಇತ್ತೀಚಿನ ತೀರ್ಮಾನಗಳು: ಉಳಿದ ೨ ಪ್ರಕರಣಗಳಲ್ಲಿ ೧ ಪ್ರಕರಣ ಸುಳ್ಳು ಎಂದು ಸಾಬೀತಾಗಿದ್ದರೆ, ಮತ್ತೊಂದು ಪ್ರಕರಣದಲ್ಲಿ ಸಿಂಧುತ್ವ ಪ್ರಮಾಣ ಪತ್ರ ಪಡೆದ ಕಾರಣ ವಿಚಾರಣೆ ಅಂತ್ಯಗೊಳಿಸಲಾಗಿದೆ.

ಈ ಬಗ್ಗೆ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರು ಹಾಗೂ ಜಿಲ್ಲಾ ಜಾತಿ ಪರಿಶೀಲನಾ ಸಮಿತಿಯ ಸದಸ್ಯ ಕಾರ್ಯದರ್ಶಿ ಶ್ರೀನಿವಾಸ್ ಅವರು ಪತ್ರಿಕಾ ಹೇಳಿಕೆಯಲ್ಲಿ ಮಾಹಿತಿ ನೀಡಿದ್ದಾರೆ.

ಚಿತ್ರ ; ಕೋಲಾರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಗಳಲ್ಲಿ ಜಾತಿ ಪ್ರಮಾಣ ಪತ್ರಗಳ ಸಿಂಧುತ್ವದ ಕುರಿತು ವಿಚಾರಣೆ ನಡೆಸಲಾಯಿತು.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande