ಅನ್ನದಾತರಿಗೆ ಕಗ್ಗತ್ತಲ ದೀಪಾವಳಿ ಗ್ಯಾರೆಂಟಿ ನೀಡಿದ ಕಾಂಗ್ರೆಸ್ ಸರ್ಕಾರ : ಅಶೋಕ
ಬೆಂಗಳೂರು, 18 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಅನ್ನದಾತರಿಗೆ ಕಗ್ಗತ್ತಲ ದೀಪಾವಳಿ ಗ್ಯಾರೆಂಟಿ ನೀಡಿದ ರೈತವಿರೋಧಿ ಕಾಂಗ್ರೆಸ್ ಸರ್ಕಾರ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆರೋಪಿಸಿದ್ದಾರೆ. ನೆರೆಪೀಡಿತ ಪ್ರದೇಶಗಳಲ್ಲಿ ಕಾಟಾಚಾರದ ವೈಮಾನಿಕ ಸಮೀಕ್ಷೆ ಮಾಡಿ ಕೈತೊಳೆದುಕೊಂಡ ಮುಖ್ಯಮಂತ್ರಿ ಸಿದ್ದರಾಮಯ್
Ashok


ಬೆಂಗಳೂರು, 18 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಅನ್ನದಾತರಿಗೆ ಕಗ್ಗತ್ತಲ ದೀಪಾವಳಿ ಗ್ಯಾರೆಂಟಿ ನೀಡಿದ ರೈತವಿರೋಧಿ ಕಾಂಗ್ರೆಸ್ ಸರ್ಕಾರ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆರೋಪಿಸಿದ್ದಾರೆ.

ನೆರೆಪೀಡಿತ ಪ್ರದೇಶಗಳಲ್ಲಿ ಕಾಟಾಚಾರದ ವೈಮಾನಿಕ ಸಮೀಕ್ಷೆ ಮಾಡಿ ಕೈತೊಳೆದುಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ, ಲಕ್ಷಾಂತರ ರೈತ ಕುಟುಂಬಗಳು ಈ ದೀಪಾವಳಿಯನ್ನು ಕಗ್ಗತ್ತಲಲ್ಲಿ ಕಳೆಯುವ ದುಸ್ಥಿತಿಗೆ ದೂಡಿದೆ.

ಒಂದು ಕಡೆ ಕೇಂದ್ರ ಸರ್ಕಾರದ ಜಿಎಸ್ಟಿ ದರ ಇಳಿಕೆಯಿಂದ ಜನಸಾಮಾನ್ಯರು ತಮಗೆ ಇಷ್ಟವಾದ ವಸ್ತುಗಳನ್ನು ಕೊಳ್ಳುವ ಮೂಲಕ ಸಂತೋಷದಿಂದ ದೀಪಾವಳಿ ಹಬ್ಬಕ್ಕಾಗಿ ಕಾಯುತ್ತಿದ್ದರೆ, ಮತ್ತೊಂದು ಕಡೆ ರಾಜ್ಯ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯದಿಂದ ಉತ್ತರ ಕರ್ನಾಟಕ ಭಾಗದ ನೆರೆಪೀಡಿತ ರೈತರು ಪರಿಹಾರಕ್ಕಾಗಿ ಕಾದೂ ಕಾದು ಕಣ್ಣೀರಿನಲ್ಲಿ ಕೈತೊಳೆಯುವ ಪರಿಸ್ಥಿತಿ ಎದುರಾಗಿದೆ.

ಈ ರೈತವಿರೋಧಿ ಕಾಂಗ್ರೆಸ್ ಪಕ್ಷಕ್ಕೆ ಅನ್ನದಾತರ ಶಾಪ ತಟ್ಟದೇ ಇರದು ಎಂದಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande