ಪಂಜಾಬ್‌ನಲ್ಲಿ ಗರೀಬ್ ರಥ ರೈಲಿಗೆ ಬೆಂಕಿ ; ತಪ್ಪಿದ ಭಾರಿ ದುರಂತ
ಚಂಡೀಗಡ, 18 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಪಂಜಾಬ್‌ನ ಫತೇಘರ್ ಸಾಹಿಬ್ ಜಿಲ್ಲೆಯ ಸಿರ್ಹಿಂದ್ ರೈಲ್ವೆ ನಿಲ್ದಾಣದ ಬಳಿ ಇಂದು ಬೆಳಿಗ್ಗೆ ಅಮೃತಸರ–ಸಹರ್ಸಾ ಗರೀಬ್ ರಥ ಎಕ್ಸ್‌ಪ್ರೆಸ್‌ನ ಒಂದು ಬೋಗಿಗೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಆತಂಕದ ವಾತಾವರಣ ನಿರ್ಮಾಣವಾಯಿತು. ಅದೃಷ್ಟವೆ ಯಾವುದೇ ಪ್ರಾಣಹಾ
Fire


ಚಂಡೀಗಡ, 18 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಪಂಜಾಬ್‌ನ ಫತೇಘರ್ ಸಾಹಿಬ್ ಜಿಲ್ಲೆಯ ಸಿರ್ಹಿಂದ್ ರೈಲ್ವೆ ನಿಲ್ದಾಣದ ಬಳಿ ಇಂದು ಬೆಳಿಗ್ಗೆ ಅಮೃತಸರ–ಸಹರ್ಸಾ ಗರೀಬ್ ರಥ ಎಕ್ಸ್‌ಪ್ರೆಸ್‌ನ ಒಂದು ಬೋಗಿಗೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಆತಂಕದ ವಾತಾವರಣ ನಿರ್ಮಾಣವಾಯಿತು. ಅದೃಷ್ಟವೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಬೆಳಿಗ್ಗೆ ಸುಮಾರು 7:30ರ ಸುಮಾರಿಗೆ 12204 ಸಂಖ್ಯೆಯ ರೈಲು ಸಿರ್ಹಿಂದ್ ನಿಲ್ದಾಣದಿಂದ ತೆರಳುತ್ತಿದ್ದ ವೇಳೆ 19ನೇ ಬೋಗಿಯಲ್ಲಿ ಹೊಗೆ ಮತ್ತು ಬೆಂಕಿ ಕಾಣಿಸಿಕೊಂಡಿದೆ. ಪ್ರಾಥಮಿಕ ತನಿಖೆಯ ಪ್ರಕಾರ, ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಅನುಮಾನಿಸಲಾಗಿದೆ.

ಘಟನೆ ಕುರಿತು ರೈಲ್ವೆ ಇಲಾಖೆ ಪ್ರಕಟಣೆ ನೀಡಿದ್ದು, “ಘಟನೆಯ ಬಗ್ಗೆ ತಿಳಿಯುತ್ತಿದ್ದಂತೆಯೇ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಂಡು, ಪ್ರಯಾಣಿಕರನ್ನು ಸುರಕ್ಷಿತವಾಗಿ ಇತರ ಬೋಗಿಗಳಿಗೆ ಸ್ಥಳಾಂತರಿಸಿದರು. ಯಾವುದೇ ಜೀವಹಾನಿ ಅಥವಾ ಗಂಭೀರ ಗಾಯಗಳಿಲ್ಲ. ರೈಲು ಶೀಘ್ರದಲ್ಲೇ ತನ್ನ ಪ್ರಯಾಣವನ್ನು ಮುಂದುವರಿಸಲಿದೆ,” ಎಂದು ತಿಳಿಸಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande