ಚೀನಾ ಜೊತೆಗೆ ವ್ಯಾಪಾರ ಕೊರತೆ ಏರಿಕೆ : ಕೇಂದ್ರಕ್ಕೆ ಜೈರಾಮ್ ರಮೇಶ್ ಎಚ್ಚರಿಕೆ
ನವದೆಹಲಿ, 18 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಚೀನಾದೊಂದಿಗಿನ ವ್ಯಾಪಾರ ಕೊರತೆ ನಿರಂತರವಾಗಿ ಏರಿಕೆಯಾಗುತ್ತಿರುವುದರ ಬಗ್ಗೆ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಕೇಂದ್ರ ಸರ್ಕಾರಕ್ಕೆ ತೀವ್ರ ಎಚ್ಚರಿಕೆ ನೀಡಿದ್ದಾರೆ. ಅವರು ಎಕ್ಸ್ ಖಾತೆಯಲ್ಲಿ ಪ್ರಕಟಿಸಿದ ಮಾಹಿತಿಯ ಪ್ರಕಾರ, 20
Ramesh


ನವದೆಹಲಿ, 18 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಚೀನಾದೊಂದಿಗಿನ ವ್ಯಾಪಾರ ಕೊರತೆ ನಿರಂತರವಾಗಿ ಏರಿಕೆಯಾಗುತ್ತಿರುವುದರ ಬಗ್ಗೆ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಕೇಂದ್ರ ಸರ್ಕಾರಕ್ಕೆ ತೀವ್ರ ಎಚ್ಚರಿಕೆ ನೀಡಿದ್ದಾರೆ.

ಅವರು ಎಕ್ಸ್ ಖಾತೆಯಲ್ಲಿ ಪ್ರಕಟಿಸಿದ ಮಾಹಿತಿಯ ಪ್ರಕಾರ, 2025ರ ಏಪ್ರಿಲ್‌ನಿಂದ ಸೆಪ್ಟೆಂಬರ್‌ವರೆಗೆ ಭಾರತದ ಚೀನಾ ವ್ಯಾಪಾರ ಕೊರತೆ 54.4 ಬಿಲಿಯನ್ ಡಾಲರ್‌ಗಳಿಗೆ ತಲುಪಿದ್ದು, ಇದು ಕಳೆದ ವರ್ಷ ಇದೇ ಅವಧಿಯ 49.6 ಬಿಲಿಯನ್ ಡಾಲರ್‌ನಿಂದ ಏರಿಕೆಯಾಗಿದೆ.

ಚೀನಾದಿಂದ ಆಗುತ್ತಿರುವ ಆಮದುಗಳು ನಿರಂತರವಾಗಿ ಹೆಚ್ಚುತ್ತಿದ್ದು, ಭಾರತದ ಉತ್ಪಾದನಾ ವಲಯಕ್ಕೆ ಇದು ದೊಡ್ಡ ಸವಾಲಾಗುತ್ತಿದೆ. “ಈ ಬೆಳವಣಿಗೆ ದೇಶದ ಆರ್ಥಿಕ ಭದ್ರತೆಗೆ ಮತ್ತು ಸ್ವಾವಲಂಬನೆ ಪ್ರಯತ್ನಗಳಿಗೆ ಧಕ್ಕೆಯಾಗಬಹುದು. ಕೇಂದ್ರ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು,” ಎಂದು ಅವರು ಆಗ್ರಹಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande