ಅ.24 ರಂದು ಕೊಪ್ಪಳ ಜಿಲ್ಲಾ ಮಟ್ಟದ ಗ್ಯಾರಂಟಿಗಳ ಪ್ರಗತಿ ಪರಿಶೀಲನಾ ಸಭೆ
ಕೊಪ್ಪಳ, 18 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ರಾಜ್ಯ ಸರ್ಕಾರದ 5 ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕುರಿತು ಪ್ರಗತಿ ಪರಿಶೀಲನಾ ಸಭೆಯನ್ನು ಅಕ್ಟೋಬರ್ 24 ರಂದು ಬೆಳಿಗ್ಗೆ 11 ಗಂಟೆಗೆ ಕೊಪ್ಪಳ ಜಿಲ್ಲಾ ಪಂಚಾಯತ್‌ನ ಜಿ.ಹೆಚ್.ಪಟೇಲ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಜಿಲ್ಲಾ ಮಟ್ಟದ ಗ್ಯಾರಂಟಿ ಯ
ಅ.24 ರಂದು ಕೊಪ್ಪಳ ಜಿಲ್ಲಾ ಮಟ್ಟದ ಗ್ಯಾರಂಟಿಗಳ ಪ್ರಗತಿ ಪರಿಶೀಲನಾ ಸಭೆ


ಕೊಪ್ಪಳ, 18 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ರಾಜ್ಯ ಸರ್ಕಾರದ 5 ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕುರಿತು ಪ್ರಗತಿ ಪರಿಶೀಲನಾ ಸಭೆಯನ್ನು ಅಕ್ಟೋಬರ್ 24 ರಂದು ಬೆಳಿಗ್ಗೆ 11 ಗಂಟೆಗೆ ಕೊಪ್ಪಳ ಜಿಲ್ಲಾ ಪಂಚಾಯತ್‌ನ ಜಿ.ಹೆಚ್.ಪಟೇಲ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ರೆಡ್ಡಿ ಶ್ರೀನಿವಾಸ ಅವರು ಸಭೆಯ ಅಧ್ಯಕ್ಷತೆ ವಹಿಸುವರು. ಸಂಬ0ಧಪಟ್ಟ ಇಲಾಖೆಗಳ ಅಧಿಕಾರಿಗಳು ಅಗತ್ಯ ಮಾಹಿತಿಯೊಂದಿಗೆ ಕಡ್ಡಾಯವಾಗಿ ಸಭೆಗೆ ಹಾಜರಾಗಬೇಕು. ಸಮಿತಿಯ ಉಪಾಧ್ಯಕ್ಷರು, ಸದಸ್ಯರು ಸಭೆಯಲ್ಲಿ ಪಾಲ್ಗೊಳ್ಳುವಂತೆ ಕೊಪ್ಪಳ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ ಅವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande