ಯಾವುದೇ ಸಂಘ-ಸಂಸ್ಥೆಗಳನ್ನು ಗುರಿಯಾಗಿಸಿಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ
ಮೈಸೂರು, 18 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಯಾವುದೇ ಸಂಘಸಂಸ್ಥೆಗಳ ಚಟುವಟಿಕೆಗಳನ್ನು ಜನರಿಗೆ ತೊಂದರೆಯಾಗುವಂತೆ ಸಾರ್ವಜನಿಕ ಸ್ಥಳಗಳಲ್ಲಿ ನಡೆಸಲು ಅನುಮತಿ ಪಡೆಯುವಂತೆ ಆದೇಶ ನೀಡಲಾಗಿದ್ದು, ಇದರಲ್ಲಿ ಯಾವುದೇ ಸಂಘಸಂಸ್ಥೆಗಳನ್ನು ಗುರಿಯಾಗಿಸಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವ
Cm


ಮೈಸೂರು, 18 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಯಾವುದೇ ಸಂಘಸಂಸ್ಥೆಗಳ ಚಟುವಟಿಕೆಗಳನ್ನು ಜನರಿಗೆ ತೊಂದರೆಯಾಗುವಂತೆ ಸಾರ್ವಜನಿಕ ಸ್ಥಳಗಳಲ್ಲಿ ನಡೆಸಲು ಅನುಮತಿ ಪಡೆಯುವಂತೆ ಆದೇಶ ನೀಡಲಾಗಿದ್ದು, ಇದರಲ್ಲಿ ಯಾವುದೇ ಸಂಘಸಂಸ್ಥೆಗಳನ್ನು ಗುರಿಯಾಗಿಸಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಚಿತ್ತಾಪುರದಲ್ಲಿ ಆರ್ ಎಸ್ ಎಸ್ ಪಥಸಂಚಲನದ ಬಗ್ಗೆ ಗೊಂದಲ ಎದ್ದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ಬಗ್ಗೆ ಹಿಂದೆ ಬಿಜೆಪಿಯ ಜಗದೀಶ್ ಶೆಟ್ಟರ್ ಅವರ ನೇತೃತ್ವದ ಸರ್ಕಾರ ಆದೇಶ ಹೊರಡಿಸಿದಂತೆ, ನಮ್ಮ ಸರ್ಕಾರವೂ ಆದೇಶವನ್ನು ಹೊರಡಿಸಿದೆ. ಬಿಜೆಪಿ ಸರ್ಕಾರ ಹೊರಡಿಸಿದ್ದ ಈ ಆದೇಶಕ್ಕೆ ಯಾವುದೇ ವಿರೋಧ ವ್ಯಕ್ತವಾಗಿರಲಿಲ್ಲ. ಈ ಆದೇಶದಲ್ಲಿ ಸರ್ಕಾರ ಯಾವುದೇ ನಿಗಧಿತವಾದ ಸಂಘಸಂಸ್ಥೆಯನ್ನು ಗುರಿ ಮಾಡಿಲ್ಲ. ಬಿಜೆಪಿ ಜನರ ಹಿತಚಿಂತನೆ ಮಾಡುವುದನ್ನು ಬಿಟ್ಟು ರಾಜಕೀಯದಲ್ಲಿ ತೊಡಗಿದ್ದಾರೆ. ಈ ವಿಷಯದಲ್ಲಿ ಸಮಾಜದ ಶಾಂತಿಭಂಗವಾಗದಂತೆ ಪೊಲೀಸ್ ಇಲಾಖೆ ನೋಡಿಕೊಳ್ಳುತ್ತದೆ ಎಂದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande