ತೆಲಂಗಾಣ : ಹಿಂದುಳಿದ ವರ್ಗ ಮೀಸಲಾತಿ ಬೇಡಿಕೆ ಮುಷ್ಕರದಿಂದ ಪರದಾಡಿದ ಸಾರ್ವಜನಿಕರು
ಹೈದರಾಬಾದ್, 18 ಅಕ್ಟೋಬರ್(ಹಿ.ಸ.) : ಆ್ಯಂಕರ್ : ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಹಿಂದುಳಿದ ವರ್ಗಗಳಿಗೆ ಶೇ.42 ಮೀಸಲಾತಿ ನೀಡುವಂತೆ ಒತ್ತಾಯಿಸಿ ಹಿಂದುಳಿದ ವರ್ಗಗಳ ಜಂಟಿ ಕ್ರಿಯಾ ಸಮಿತಿಯು ಕರೆ ನೀಡಿದ ಹಿನ್ನೆಲೆಯಲ್ಲಿ ರಾಜ್ಯವ್ಯಾಪಿ ಮುಷ್ಕರದಿಂದ ತೆಲಂಗಾಣದ ಸಾರ್ವಜನಿಕ ಸಾರಿಗೆ ಸಂಪೂರ್ಣ ಅಸ್ತವ್ಯ
Protest


ಹೈದರಾಬಾದ್, 18 ಅಕ್ಟೋಬರ್(ಹಿ.ಸ.) :

ಆ್ಯಂಕರ್ : ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಹಿಂದುಳಿದ ವರ್ಗಗಳಿಗೆ ಶೇ.42 ಮೀಸಲಾತಿ ನೀಡುವಂತೆ ಒತ್ತಾಯಿಸಿ ಹಿಂದುಳಿದ ವರ್ಗಗಳ ಜಂಟಿ ಕ್ರಿಯಾ ಸಮಿತಿಯು ಕರೆ ನೀಡಿದ ಹಿನ್ನೆಲೆಯಲ್ಲಿ ರಾಜ್ಯವ್ಯಾಪಿ ಮುಷ್ಕರದಿಂದ ತೆಲಂಗಾಣದ ಸಾರ್ವಜನಿಕ ಸಾರಿಗೆ ಸಂಪೂರ್ಣ ಅಸ್ತವ್ಯಸ್ತಗೊಂಡಿತ್ತು.

ಮುಷ್ಕರದ ಪರಿಣಾಮವಾಗಿ ಹೈದರಾಬಾದ್ ಸೇರಿದಂತೆ ಎಲ್ಲಾ ಜಿಲ್ಲೆಗಳಲ್ಲಿ ಆರ್‌ಟಿಸಿ ಬಸ್‌ಗಳು ಸಂಚಾರ ಸ್ಥಗಿತಗೊಳಿಸಿದ ಹಿನ್ನೆಲೆಯಲ್ಲಿ, ಸಾವಿರಾರು ಪ್ರಯಾಣಿಕರು ಬಸ್ ನಿಲ್ದಾಣಗಳಲ್ಲಿ ಅಸಹಾಯಕರಾಗಿ ಪರದಾಡಿದರು. ದೀಪಾವಳಿ ಹಬ್ಬದ ಪ್ರಯುಕ್ತ ಊರಿಗೆ ಪ್ರಯಾಣಿಸಲು ಬಯಸುವ ಪ್ರಯಾಣಿಕರಿಗೆ ಟಿಕೆಟ್ ಕಾಯ್ದಿರಿಸಲು ಮತ್ತು ಬಸ್ ಸಿಗದೆ ತೊಂದರೆ ಎದುರಾಯಿತು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande