ಚಂಡೀಗಡ, 18 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಹವಾಮಾನದಲ್ಲಿ ಉಂಟಾದ ಬದಲಾವಣೆಯ ಹಿನ್ನೆಲೆ ಅಟ್ಟಾರಿಯ ಭಾರತ-ಪಾಕಿಸ್ತಾನ ಗಡಿಯಲ್ಲಿ ಪ್ರತಿದಿನ ನಡೆಯುವ ರಿಟ್ರೀಟ್ ಸಮಾರಂಭದ ಸಮಯವನ್ನು ಪರಿಷ್ಕರಿಸಲಾಗಿದೆ.
ಬಿಎಸ್ಎಫ್ ಬಿಡುಗಡೆ ಮಾಡಿದ ಅಧಿಕೃತ ಪ್ರಕಟಣೆಯ ಪ್ರಕಾರ, ಈ ಮೊದಲು ಸಂಜೆ 5:30ರಿಂದ 6:00ರವರೆಗೆ ನಡೆಯುತ್ತಿದ್ದ ಸಮಾರಂಭವನ್ನು ಸಂಜೆ 5:00ರಿಂದ 5:30ಕ್ಕೆ ನಿಗದಿಪಡಿಸಲಾಗಿದೆ.
ಬದಲಾಗುತ್ತಿರುವ ಹವಾಮಾನ ಪರಿಸ್ಥಿತಿಗಳನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ. ಹೊಸ ಸಮಯದ ಪ್ರಕಾರ ಎಲ್ಲಾ ಪ್ರವಾಸಿಗರು ಹಾಗೂ ಸ್ಥಳೀಯ ನಾಗರಿಕರು ಸಮಯಕ್ಕೆ ಸರಿಯಾಗಿ ಸ್ಥಳಕ್ಕೆ ಆಗಮಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa