ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರ ನೋಂದಣಿ ಪ್ರಕ್ರಿಯೆ ; ಸ್ವೀಪ್ ಸಮಿತಿ ಸಭೆ
ರಾಯಚೂರು, 18 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಅರ್ಹ ಶಿಕ್ಷಕರು ಹೆಚ್ಚನ ಸಂಖ್ಯೆಯಲ್ಲಿ ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರ ನೋಂದಣಿ ಪ್ರಕ್ರಿಯೆಯಲ್ಲಿ ಭಾಗವಹಿಸಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು ಎಂದು ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರ ನೋಂದಣಿ ಪ್ರಕ್ರಿಯೆ ಜಿಲ್ಲಾ ಸ್ವೀ
ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರ ನೋಂದಣಿ ಪ್ರಕ್ರಿಯೆ: ಸ್ವೀಪ್ ಸಮಿತಿ ಸಭೆ


ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರ ನೋಂದಣಿ ಪ್ರಕ್ರಿಯೆ: ಸ್ವೀಪ್ ಸಮಿತಿ ಸಭೆ


ರಾಯಚೂರು, 18 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಅರ್ಹ ಶಿಕ್ಷಕರು ಹೆಚ್ಚನ ಸಂಖ್ಯೆಯಲ್ಲಿ ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರ ನೋಂದಣಿ ಪ್ರಕ್ರಿಯೆಯಲ್ಲಿ ಭಾಗವಹಿಸಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು ಎಂದು ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರ ನೋಂದಣಿ ಪ್ರಕ್ರಿಯೆ ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷರ ಆಗಿರುವ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಈಶ್ವರ್ ಕಾಂದೂ ಅವರು ಸಲಹೆ ಮಾಡಿದರು.

ಜಿಲ್ಲಾ ಪಂಚಾಯತ್ ಕಚೇರಿಯ ಜಲನಿರ್ಮಲ ಸಭಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ಸ್ವೀಪ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಅರ್ಹತಾ ದಿನಾಂಕ 01.11.2025ಕ್ಕೆ ಅನ್ವಯಸುವಂತೆ ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯನ್ನು ನೂತನವಾಗಿ ಸಿದ್ಧಪಡಿಸಲು ಭಾರತ ಚುನಾವಣಾ ಆಯೋಗವು ಸೂಚನೆ ನೀಡಿದೆ. ನಮೂನೆ 19ರಲ್ಲಿನ ಅರ್ಜಿಯನ್ನು ಸ್ವೀಕರಿಸಲು 06ನೇ ನವಂಬರ್ 2025 ಕೊನೆಯ ದಿನವಾಗಿದೆ. ಕರಡು ಮತದಾರರ ಪಟ್ಟಿಯನ್ನು 25ನೇ ನವೆಂಬರ್ 2025ರಂದು ಪ್ರಕಟಣೆ ಮಾಡಲಾಗುತ್ತದೆ. 25ನೇ ನವೆಂಬರ್ 2025ರಿಂದ 10ನೇ ಡಿಸೆಂಬರ್ 2025ರ ಅವಧಿವರೆಗೆ ಹಕ್ಕು ಮತ್ತು ಆಕ್ಷೇಪಣೆಗಳಿಗೆ ಅವಕಾಶ ನೀಡಲಾಗಿದೆ. 30ನೇ ಡಿಸೆಂಬರ್ 2025ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಣೆ ಮಾಡಲಾಗುತ್ತದೆ.

ಈ ಮತದಾರ ನೋಂದಣಿ ಪ್ರಕ್ರಿಯೆ ಮುಕ್ತಾಯಗೊಳ್ಮ್ಳವವರೆಗೆ ಅರ್ಹ ವ್ಮತದಾರರನ್ಮ್ನ ಗುರುತಿಸಿ ನೋಂದಣಿ ಮಾಡಿಸುವಲ್ಲಿ ಎಲ್ಲ ರೀತಿಯ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರಾದ ಕುಲಪತಿಗಳು, ಪ್ರಾಂಶುಪಾಲರು, ಮುಖ್ಯಾಧ್ಯಾಪಕರು ಹಾಗೂ ಇತರೆ ಸಮುಚಿತವೆನಿಸುವ ಇಲಾಖೆಗಳ ಅಧಿಕಾರಿಗಳ ತವ್ಮ್ಮ ವ್ಯಾಪ್ತಿಯಲ್ಲಿನ ಅರ್ಹ ವ್ಮತದಾರರನ್ನು ಗುರುತಿಸಿ ನೋಂದಣಿ ಮಾಡಿಸುವಲ್ಲಿ ಮುತುವರ್ಜಿ ವಹಿಸಬೇಕು ಮತ್ತು ಈ ಬಗ್ಗೆ ವ್ಯಾಪಕ ಪ್ರಚಾರ ನಡೆಸಿ ಅಚಿತಹ ಅರ್ಹರಿಂದ ನಮೂನೆ 19ರಲ್ಲಿ ನೋಂದಣಿಗಾಗಿ ಅರ್ಜಿ ಪಡೆದು ಸಂಬAಧಪಟ್ಟ ಸಹಾಯಕ ಮತದಾನ ನೋಂದಣಾಧಿಕಾರಿಗಳಿಗೆ ಸಲ್ಲಿಸಬೇಕು ಎಂದು ಸಿಇಓ ಅವರು ಸೂಚನೆ ನೀಡಿದರು.

ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಬಯಸುವ ಪ್ರತಿಯೊಬ್ಬರು ಅರ್ಜಿ ನಮೂನೆ 19 ನ್ನು ಭರ್ತಿಮಾಡಿ ಅದರೊಂದಿಗೆ ಶೈಕ್ಷಣಿಕ ಸಂಸ್ಥೆಗಳಲ್ಲಿ 1ನೇ ನವೆಂಬರ್ 2025ಕ್ಕೆ ಮೊದಲು 6 ವರ್ಷಗಳ ಅವಧಿಯಲ್ಲಿ ಒಟ್ಟು ಕನಿಷ್ಟ 3 ವರ್ಷ ಭೋದನಾ ವೃತಿಯಲ್ಲಿ ನಿರತವಾಗಿರುವ ಬಗ್ಗೆ ಶೈಕ್ಷಣಿಕ ಸಂಸ್ಥೆಗಳಿ0ದ ಅನುಬಂಧ-2 ರಲ್ಲಿ ಸಂಬಳ ಬಟವಾಡೆ ಅಧಿಕಾರಿಯಿಂದ ಪ್ರಮಾಣ ಪತ್ರ ಸಲ್ಲಿಸಬೇಕು. ಅರ್ಜಿದಾರರು ನಮೂನೆ-19ರ ಅರ್ಜಿಯೊಂದಿಗೆ ಆಧಾರ ಕಾರ್ಡ್, ಚುನಾವಣಾ ಗುರುತಿನ ಚೀಟಿ ಹಾಗೂ ಬೀಳಿ ಬಣ್ಣದ ಹಿನ್ನೆಲೆ ಹೊಂದಿದ 2 ಪಾಸ್‌ಪೋರ್ಟ ಅಳತೆಯ ಭಾವಚಿತ್ರಗಳನ್ನು ಸಲ್ಲಿಸಬೇಕು ಎಂದು ಸಿಇಓ ಅವರು ತಿಳಿಸಿದರು.

ಖಡಿಪಿಐ, ಡಿಡಿಪಿಯುಗೆ ಸೂಚನೆ: ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರ ನೋಂದಣಿ ಪ್ರಕ್ರಿಯೆಗೆ ಸಂಬAಧಿಸಿದAತೆ ಜಾಗೃತರಾಗಿ ಕೆಲಸ ಮಾಡಬೇಕು. ವ್ಯಾಪಕ ಪ್ರಚಾರಕ್ಕೆ ಕ್ರಮವಹಿಸಬೇಕು ಎಂದು ಇದೆ ವೇಳೆ ಸಿಇಓ ಅವರು ಡಿಡಿಪಿಐ ಮತ್ತು ಡಿಡಿಪಿಯುಗೆ ಸೂಚನೆ ನೀಡಿದರು.

ಮತದಾರರ ಮಿಂಚಿನ ನೋಂದಣಿ: ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಮತದಾರರ ನೋಂದಣಾಧಿಕಾರಿಗಳು ಆಗಿರುವ ಕುಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರಾದ ಜಹೀರಾ ನಸೀಮ ಅವರು ಶಿಕ್ಷಕರ ಕ್ಷೇತ್ರದ ಮತದಾರ ನೋಂದಣಿ ಪ್ರಕ್ರಿಯೆಯನ್ನು ಎಲ್ಲಾ ಜಿಲ್ಲೆಗಳಲ್ಲಿ ಚುರುಕಾಗಿ ನಡೆಸಲು ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ. ಹೀಗಾಗಿ ಈ ಕಾರ್ಯಕ್ಕೆ ನಿಯೋಜನೆಗೊಂಡ ಅಧಿಕಾರಿಗಳು ಈ ಕಾರ್ಯಕ್ಕೆ ಮೊದಲಾದ್ಯತೆ ನೀಡಬೇಕು. ರಾಯಚೂರು ಜಿಲ್ಲೆಯು ಉತ್ತಮ ಸ್ಥಾನ ಕಾಯ್ದುಕೊಳ್ಳವು ಹಾಗೆ ಪ್ರತಿದಿನ ಅರ್ಹ ಶಿಕ್ಷಕರ ಕ್ಷೇತ್ರದ ಮತದಾರ ನೋಂದಣಿ ಪ್ರಕ್ರಿಯೆಯು ಬಿರುಸಾಗಿ ನಡೆಯಬೇಕು. ಈ ನಿಟ್ಟಿನಲ್ಲಿ ಅಕ್ಟೋಬರ್ 27, 30 ಹಾಗೂ ನವೆಂಬರ್ 3ರಂದು ಮತದಾರರ ಮಿಂಚಿನ ನೋಂದಣಿ ಕಾರ್ಯಾಚರಣೆಗೆ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಸಿಇಓ ಅವರು ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಹಾಲಸಿದ್ದಪ್ಪ ಪೂಜಾರಿ, ಶಾಲಾ ಶಿP್ಪ್ಷಣ ಇಲಾಖೆಯ ಉಪ ನಿರ್ದೇಶಕರಾದ ಕೆ.ಡಿ.ಬಡಿಗೇರ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಸೋಮಶೇಖರಪ್ಪ ಹೊಕ್ರಾಣಿ, ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ಉಪ ಕುಲಸಚಿವರಾದ ಡಾ.ಜಿ.ಎಸ್.ಬಿರಾದಾರ, ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಸಹಾಯಕ ಕುಲಸಚವರಾದ ವಿರುಪಣ್ಣ ಕೆ.ಎಂ., ಸ್ವೀಪ್ ಸಮಿತಿಯ ನೋಡಲ್ ಅಧಿಕಾರಿಗಳಾದ ಡಾ.ವಾಲ್ಮೀಕಿ ಬಿ ಎಂ., ಇಸಿಓ ರಾಘವೇಂದ್ರ, ಮತದಾರ ಸಾಕ್ಷರತಾ ಕ್ಲಬ್‌ನ ನೋಡಲ್ ಅಧಿಕಾರಿ ಡಾ.ದಂಡಪ್ಪ ಬಿರಾದಾರ, ವಾರ್ತಾ ಇಲಾಖೆಯ ವಾರ್ತಾ ಸಹಾಯಕರಾದ ಗವಿಸಿದ್ದಪ್ಪ ಹೊಸಮನಿ, ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಇನ್ನೀತರರು ಇದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande