ಜಿಪಂ, ತಾಪಂ ಚುನಾವಣೆಯಲ್ಲಿ ಮಹಿಳಾ ಪಾತ್ರ ಮಹತ್ವ : ಸೌಮ್ಯಾ ರೆಡ್ಡಿ
ವಿಜಯಪುರ, 18 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ವಿಜಯಪುರ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆಗಳು ಸಮೀಪಿಸುತ್ತಿದ್ದು, ಈ ಚುನಾವಣೆಯಲ್ಲಿ ಪಕ್ಷ ಜಯಭೇರಿ ಬಾರಿಸುವ ನಿಟ್ಟಿನಲ್ಲಿ ಮಹಿಳೆಯರ ಪಾತ್ರ ಮಹತ್ವದಾಗಿದೆ. ಆದ್ದರಿಂದ ಮಹಿಳಾ ಕಾರ್ಯಕರ್ತೆಯರು ಶ್ರಮಿಸಬೇಕು ಎಂದು ಕೆಪಿಸಿಸಿ ಮಹಿಳಾ ಘಟ
ರೆಡ್ಡಿ


ವಿಜಯಪುರ, 18 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ವಿಜಯಪುರ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆಗಳು ಸಮೀಪಿಸುತ್ತಿದ್ದು, ಈ ಚುನಾವಣೆಯಲ್ಲಿ ಪಕ್ಷ ಜಯಭೇರಿ ಬಾರಿಸುವ ನಿಟ್ಟಿನಲ್ಲಿ ಮಹಿಳೆಯರ ಪಾತ್ರ ಮಹತ್ವದಾಗಿದೆ. ಆದ್ದರಿಂದ ಮಹಿಳಾ ಕಾರ್ಯಕರ್ತೆಯರು ಶ್ರಮಿಸಬೇಕು ಎಂದು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ, ಮಾಜಿ ಶಾಸಕಿ ಸೌಮ್ಯಾ ರೆಡ್ಡಿ ಹೇಳಿದರು.

ನಗರದ ಸ್ಟಾರ್ ಸಭಾಂಗಣದಲ್ಲಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ರಮೀಜಾ ನದಾಫ್ ಅವರ ಪದಗ್ರಹಣ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಅನೇಕ ಜನಪರ ಕಾರ್ಯಕ್ರಮಗಳನ್ನು ರೂಪಿಸಿದೆ, ಈ ಎಲ್ಲ ಜನಪರ ಕಾರ್ಯಗಳನ್ನು ಮಹಿಳಾ ಕಾರ್ಯಕರ್ತೆಯರು ಜನರ ಮನೆ ಮನೆಗೆ ತಿಳಿಸುವ ಕಾರ್ಯ ಮಾಡಬೇಕು ಎಂದರು.

ಕೆಪಿಸಿಸಿ ಮಹಿಳಾ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ, ನ್ಯಾಯವಾದಿ ಸಂಯುಕ್ತಾ ಪಾಟೀಲ ಮಾತನಾಡಿ, ಇಂದು ಮಹಿಳೆ ಹಿಂದೆAದಿಗಿAತಲೂ ದೊಡ್ಡ ಸವಾಲು ಎದುರಿಸುತ್ತಿದ್ದಾಳೆ, ಪ್ರತಿ ನಿಮಿಷಕ್ಕೆ ಮಹಿಳೆ ಮೇಲೆ ದೌರ್ಜನ್ಯ ನಡೆಯುತ್ತಿದೆ, ಈ ಕಾಲಘಟ್ಟದಲ್ಲಿ ಮಹಿಳೆ ರಾಜಕೀಯವಾಗಿಯೂ ಪ್ರಬಲಗೊಳ್ಳಬೇಕು ಎಂದರು.

ನಿಕಟಪೂರ್ವ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ವಿದ್ಯಾರಾಣಿ ತುಂಗಳ ಮಾತನಾಡಿ, ನಾನು ಅಧಿಕಾರ ಸ್ವೀಕರಿಸಿದ ಸಂದರ್ಭದಲ್ಲಿ ಅನೇಕ ಸವಾಲುಗಳಿದ್ದವು, ನಾನು ಪದಗ್ರಹಣ ಮಾಡಿದ ಸಂದರ್ಭದಲ್ಲಿ ಕೋವಿಡ್ ಕಾಲಿಟ್ಟಿತ್ತು, ಕೋವಿಡ್ ಸಂದರ್ಭದಲ್ಲಿ ಇಡೀ ಜಗತ್ತೇ ಸ್ತಬ್ಧವಾಗಿ ನೋವಿನ ಛಾಯೆಯಲ್ಲಿತ್ತು, ಈ ವೇಳೆ ನಾನು ಅಧಿಕಾರ ಸ್ವೀಕರಿಸಿದೆ ಎಂದರು.

ಪದಗ್ರಹಣ ಮಾಡಿದ ಮಹಿಳಾ ಕಾಂಗ್ರೆಸ್ ನೂತನ ಜಿಲ್ಲಾಧ್ಯಕ್ಷೆ ರಮೀಜಾ ನದಾಫ್ ಮತನಾಡಿ, ಬಿಜೆಪಿ ವಿನಾಕಾರಣ ಸಮಾಜದಲ್ಲಿ ಅಶಾಂತಿ, ಕೋಮುವಾದ ಸೃಷ್ಟಿಸುತ್ತಿದೆ, ಅದರೆ ಕಾಂಗ್ರೆಸ್ ಸೇವೆಗೆ ಆದ್ಯತೆ ನೀಡಿದೆ, ಸಮಾಜದಲ್ಲಿ ಶಾಂತಿ ಕದಡದಂತೆ ನೋಡಿಕೊಳ್ಳುವ ಜವಾಬ್ದಾರಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಮೇಲಿದೆ ಎಂದರು.

ಎಐಸಿಸಿಸಿ ಮಾಜಿ ಸದಸ್ಯೆ ಶ್ರೀದೇವಿ ಉತ್ಲಾಸರ, ಜಿಪಂ ಮಾಜಿ ಅಧ್ಯಕ್ಷೆ ಸುಜಾತಾ ಕಳ್ಳಿಮನಿ, ಗೌರಮ್ಮ ಮುತ್ತತ್ತಿ, ಮಹಾದೇವಿ ಗೋಕಾಕ, ರುಕ್ಮೀಣಿ ಚವ್ಹಾಣ, ಭಾರತಿ ನಾವಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಲೋಣಿ, ಕೆಪಿಸಿಸಿ ಸದಸ್ಯ ಅಬ್ದುಲ್ ಹಮೀದ್ ಮುಶ್ರೀಫ್, ಗಡಿನಾಡು ಅಭಿವೃದ್ಧಿ ಪ್ರಾದಿಕಾರದ ಮಾಜಿ ಅಧ್ಯಕ್ಷ ಸುಭಾಷ ಛಾಯಾಗೋಳ, ಡಾ.ಪ್ರಭುಗೌಡ ಪಾಟೀಲ ಲಿಂಗದಳ್ಳಿ, ಬಿ.ಆರ್. ಪಾಟೀಲ ಯಾಳಗಿ, ಮೊಹ್ಮದ್ ರಫೀಕ್ ಕಾಣೆ, ಜಮೀರ್ ಭಕ್ಷಿ, ಎಂ.ಸಿ. ಮುಲ್ಲಾ, ವಸಂತ ಹೊನಮೋಡೆ ಇದ್ದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande