ಶಿವಮೊಗ್ಗ, 19 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಬಾಲ ಹಾಗೂ ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986, ಬಾಲ ಹಾಗೂ ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ತಿದ್ದುಪಡಿ ನಿಯಮಗಳು 2017 (ಕೇಂದ್ರ /ರಾಜ್ಯ) ಎಸ್.ಓ.ಪಿ( ಕೇಂದ್ರ/ರಾಜ್ಯ) 2017 ಗಳ ಅನುಷ್ಠಾನ ಮಾಹಿತಿ ಶಿಕ್ಷಣ ಮತ್ತು ಸಂವಹನ(ಐಇಸಿ) ಚಟುವಟಿಕೆಗಳು, ಸಮೀಕ್ಷೆ, ಕಾರ್ಯಾಗಾರ, ಇತರೆ ಚಟುವಟಿಕೆಗಳನ್ನು ಹಮ್ಮಿಕೊಳ್ಳಲು ಮತ್ತು ಕರ್ನಾಟಕವನ್ನು ಬಾಲ ಹಾಗೂ ಕಿಶೋರ ಕಾರ್ಮಿಕ ಮುಕ್ತ ರಾಜ್ಯವನ್ನಾಗಿಸಲು ರಾಜ್ಯ ಸರ್ಕಾರವು ಜಾರಿಗೆ ತಂದಿರುವ ರಾಜ್ಯ ಬಾಲಕಾರ್ಮಿಕ ಪುನರ್ವಸತಿ ಯೋಜನೆ ಅನುಷ್ಠಾನ ಹಾಗೂ ಬಾಲ ಹಾಗೂ ಕಿಶೋರ ಕಾರ್ಮಿಕ ಪದ್ಧತಿಯನ್ನು ಸಂಪೂರ್ಣವಾಗಿ ನಿರ್ಮೂಲನೆಗೊಳಿಸಲು ಉದ್ಯೋಗದಾತರಿಂದ, ಸಂಸ್ಥೆಗಳಿಂದ ಹಾಗೂ ಸಾರ್ವಜನಿಕರಿಂದ ದೇಣಿಗೆಯನ್ನು ಪಡೆಯುವುದು ಅವಶ್ಯವಿರುತ್ತದೆ ಎಂದು ಸರ್ಕಾರವು ಅನುಮೋದನೆ ನೀಡಿರುತ್ತದೆ.
ಕರ್ನಾಟಕ ರಾಜ್ಯ ಬಾಲಕಾರ್ಮಿಕ ನಿರ್ಮೂಲನಾ ಯೋಜನಾ ಸೊಸೈಟಿಯ ವತಿಯಿಂದ ದೇಣಿಗೆ ಪಡೆಯುವ ಕುರಿತು ಆದಾಯಕರ ಇಲಾಖೆಯಿಂದ 80ಜಿ, 12ಎ ಪ್ರಮಾಣ ಪತ್ರವನ್ನು ಹಾಗೂ CSR ಚಟುವಟಿಕೆಗಳನ್ನು ನಡೆಸಲು Ministry of Corporate Affairs, Government of India ಇವರಿಂದ ಅನುಮತಿ ಪಡೆಯಲಾಗಿದೆ. ಈ ದೇಣಿಗೆಯನ್ನು ಕರ್ನಾಟಕ ರಾಜ್ಯ ಬಾಲಕಾರ್ಮಿಕ ನಿರ್ಮೂಲನಾ ಯೋಜನಾ ಸೊಸೈಟಿಯ Canara Bank Account Number :110058103941 IFSC Code; CNRB0007295 Bangalore ಗೆ ಜಮಾ ಮಾಡುವಂತೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿಯ ಅಧ್ಯಕ್ಷರು ಮನವಿಯಲ್ಲಿ ತಿಳಿಸಿರುತ್ತಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa