ಹೊಸ ನ್ಯಾಯಬೆಲೆ ಅಂಗಡಿಗಳಿಗಾಗಿ ಅರ್ಜಿ ಆಹ್ವಾನ
ಧಾರವಾಡ, 19 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಸಾರ್ವಜನಿಕ ವಿತರಣಾ ಪದ್ಧತಿಯಡಿ ಅರ್ಹ ಫಲಾನುಭವಿಗಳಿಗೆ ನ್ಯಾಯಬೆಲೆ ಅಂಗಡಿಗಳ ಮುಖಾಂತರ ಪಡಿತರ ಸಾಮಗ್ರಿಗಳನ್ನು ಉಚಿತವಾಗಿ ವಿತರಿಸಲಾಗುತ್ತಿದೆ. ಧಾರವಾಡ ಜಿಲ್ಲೆಯ ಹುಬ್ಬಳ್ಳಿ ನಗರದ ಬೆಂಗೇರಿ–ಗೋಪನಕೊಪ್ಪ, ಕರ್ಕಿ ಬಸವೇಶ್ವರನಗರ ಹಾಗೂ ಆನಂದನಗರ ಪ್ರದೇಶ
ಹೊಸ ನ್ಯಾಯಬೆಲೆ ಅಂಗಡಿಗಳಿಗಾಗಿ ಅರ್ಜಿ ಆಹ್ವಾನ


ಧಾರವಾಡ, 19 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಸಾರ್ವಜನಿಕ ವಿತರಣಾ ಪದ್ಧತಿಯಡಿ ಅರ್ಹ ಫಲಾನುಭವಿಗಳಿಗೆ ನ್ಯಾಯಬೆಲೆ ಅಂಗಡಿಗಳ ಮುಖಾಂತರ ಪಡಿತರ ಸಾಮಗ್ರಿಗಳನ್ನು ಉಚಿತವಾಗಿ ವಿತರಿಸಲಾಗುತ್ತಿದೆ.

ಧಾರವಾಡ ಜಿಲ್ಲೆಯ ಹುಬ್ಬಳ್ಳಿ ನಗರದ ಬೆಂಗೇರಿ–ಗೋಪನಕೊಪ್ಪ, ಕರ್ಕಿ ಬಸವೇಶ್ವರನಗರ ಹಾಗೂ ಆನಂದನಗರ ಪ್ರದೇಶಗಳಲ್ಲಿ ಕರ್ನಾಟಕ ಅಗತ್ಯ ವಸ್ತುಗಳ ಸಾರ್ವಜನಿಕ ವಿತರಣಾ ಪದ್ಧತಿ (ನಿಯಂತ್ರಣ) ಆದೇಶ 2016ರ ಕಲಂ 11(2) ರನ್ವಯ 800 ಪಡಿತರ ಚೀಟಿಗಳಿಗೊಂದು ಒಟ್ಟು 3 ಹೊಸ ನ್ಯಾಯಬೆಲೆ ಅಂಗಡಿ ಮಂಜೂರಾತಿ ಕುರಿತು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ರಾಜ್ಯ ಸರ್ಕಾರ ಸ್ವಾಮ್ಯದ ನಿಗಮಗಳು, ಕಂಪನಿಗಳು ಅಥವಾ ನಗರ ಸ್ಥಳೀಯ ಸಂಸ್ಥೆಗಳು, ಸಹಕಾರ ಸಂಘಗಳ ಕಾಯ್ದೆ 1959 ರಡಿ ನೊಂದಾವಣೆಗೊಂಡಿರುವ ಸಹಕಾರ ಸಂಘಗಳು, ಕರ್ನಾಟಕ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಮಾನ್ಯತೆ ಪಡೆದ ಸ್ತ್ರೀಶಕ್ತಿ ಗುಂಪು ಮತ್ತು ಮಹಿಳಾ ಸ್ವಸಹಾಯ ಗುಂಪು ಹಾಗೂ ಬೆಂಚ್‍ಮಾರ್ಕ ವಿಕಲಚೇತನರ ವ್ಯಕ್ತಿಗಳು ಹಾಗೂ ಲಿಂಗತ್ವ ಅಲ್ಪಸಂಖ್ಯಾತರ ವರ್ಗದ ವೈಯಕ್ತಿಕ ವ್ಯಕ್ತಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಯನ್ನು ಹಾಗೂ ಅರ್ಜಿ ನಮೂನೆಗಳನ್ನು ಹುಬ್ಬಳ್ಳಿ ಲ್ಯಾಮಿಂಗಟನ್ ಶಾಲೆ ಹತ್ತಿರದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಅಥವಾ ಧಾರವಾಡ ಜಿಲ್ಲಾಧಿಕಾರಿಗಳ ಕಛೇರಿಯ ಆವರಣದಲ್ಲಿರುವ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿಯಲ್ಲಿ ಪಡೆದು, ನವೆಂಬರ್ 13, 2025 ರ ಸಂಜೆ 5:30 ರೊಳಗಾಗಿ ಧಾರವಾಡ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕರ ಕಚೇರಿಗೆ ಅರ್ಜಿ ಸಲ್ಲಿಸಬಹುದು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕ ಡಾ. ವಿನೋದ ಹೆಗ್ಗಳಗಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande