ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ : ಮತದಾನ ಆರಂಭ
ಬೆಳಗಾವಿ, 19 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಬೆಳಗಾವಿ ಜಿಲ್ಲಾ ಸಹಕಾರ ಬ್ಯಾಂಕ್ ಗದ್ದುಗೆಗೆ ಇಂದು ನಡೆಯುತ್ತಿರುವ ಚುನಾವಣೆಯಲ್ಲಿ ಜಾರಕಿಹೊಳಿ ಸಹೋದರರು, ಸವದಿ ಹಾಗೂ ಕತ್ತಿ ತಂಡಗಳ ನಡುವೆ ತೀವ್ರ ಪೈಪೋಟಿ ಉಂಟಾಗಿದೆ. ಲಿಂಗಾಯತ ನಾಯಕರಾದ ರಮೇಶ ಕತ್ತಿ ಮತ್ತು ಲಕ್ಷ್ಮಣ ಸವದಿ ಬಹಿರಂಗವಾಗಿ ಜಾರಕಿಹೊ
Election


ಬೆಳಗಾವಿ, 19 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಬೆಳಗಾವಿ ಜಿಲ್ಲಾ ಸಹಕಾರ ಬ್ಯಾಂಕ್ ಗದ್ದುಗೆಗೆ ಇಂದು ನಡೆಯುತ್ತಿರುವ ಚುನಾವಣೆಯಲ್ಲಿ ಜಾರಕಿಹೊಳಿ ಸಹೋದರರು, ಸವದಿ ಹಾಗೂ ಕತ್ತಿ ತಂಡಗಳ ನಡುವೆ ತೀವ್ರ ಪೈಪೋಟಿ ಉಂಟಾಗಿದೆ.

ಲಿಂಗಾಯತ ನಾಯಕರಾದ ರಮೇಶ ಕತ್ತಿ ಮತ್ತು ಲಕ್ಷ್ಮಣ ಸವದಿ ಬಹಿರಂಗವಾಗಿ ಜಾರಕಿಹೊಳಿ ಸಹೋದರರ ವಿರುದ್ಧ ಕಣಕ್ಕಿಳಿದಿದ್ದಾರೆ.

ಒಟ್ಟು 15 ತಾಲೂಕುಗಳಲ್ಲಿ 8 ತಾಲೂಕು ಮತ್ತು 1 ಇತರ ವಿಭಾಗದಲ್ಲಿ ಅವಿರೋಧ ಆಯ್ಕೆ ನಡೆದಿದ್ದು, ಉಳಿದ 7 ತಾಲೂಕುಗಳಲ್ಲಿ ಮತದಾನ ನಡೆಯುತ್ತಿದೆ. ಜಾರಕಿಹೊಳಿ ಸಹೋದರರು ಬಹುಮತದ ವಿಶ್ವಾಸ ವ್ಯಕ್ತಪಡಿಸಿದರೆ, ಸವದಿ ಫಲಿತಾಂಶವೇ ಸತ್ಯ ಹೇಳಲಿದೆ ಎಂದು ಸವಾಲು ಹಾಕಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande