ದೀಪಾವಳಿ ಹಬ್ಬ ; ಪರಿಸರ ಸ್ನೇಹಿ ಪಟಾಕಿ ಬಳಕೆಗೆ ಮನವಿ
ವಿಜಯಪುರ, 19 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ವಿಜಯಪುರ ಜಿಲ್ಲೆಯಲ್ಲಿ ಅ.25 ರವರೆಗೆ ಆಚರಿಸುವ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕರು ಪರಿಸರ ಸ್ನೇಹಿ ಹಸಿರು ಪಟಾಕಿಯನ್ನು ಬಳಸುವಂತೆ ಮಹಾನಗರ ಪಾಲಿಕೆ ಆಯುಕ್ತರು ಮನವಿ ಮಾಡಿಕೊಂಡಿದ್ದಾರೆ. ದೀಪಾವಳಿ ಹಬ್ಬದ ಸಂದರ್ಭದಲ್ಲಿ ಹಸಿರು ಪಟಾಕಿಗಳ
ದೀಪಾವಳಿ ಹಬ್ಬ ; ಪರಿಸರ ಸ್ನೇಹಿ ಪಟಾಕಿ ಬಳಕೆಗೆ ಮನವಿ


ವಿಜಯಪುರ, 19 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ವಿಜಯಪುರ ಜಿಲ್ಲೆಯಲ್ಲಿ ಅ.25 ರವರೆಗೆ ಆಚರಿಸುವ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕರು ಪರಿಸರ ಸ್ನೇಹಿ ಹಸಿರು ಪಟಾಕಿಯನ್ನು ಬಳಸುವಂತೆ ಮಹಾನಗರ ಪಾಲಿಕೆ ಆಯುಕ್ತರು ಮನವಿ ಮಾಡಿಕೊಂಡಿದ್ದಾರೆ.

ದೀಪಾವಳಿ ಹಬ್ಬದ ಸಂದರ್ಭದಲ್ಲಿ ಹಸಿರು ಪಟಾಕಿಗಳನ್ನು ಮಾತ್ರ ಬಳಸುವಂತೆ ಹಾಗೂ ರಾತ್ರಿ 10 ಗಂಟೆಯವರೆಗೆ ಮಾತ್ರ ಅವಕಾಶ ನೀಡಲಾಗಿದೆ. ಉಳಿದ ಸಮಯದಲ್ಲಿ ಪಟಾಕಿಗಳ ಸ್ಫೋಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಎಲ್ಲ ಪಟಾಕಿ ಮಾರಾಟ ವರ್ತಕರು ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮಾಡಲು ಹಾಗೂ ಪರಿಸರ ಹಾನಿ ಉಂಟಾಗುವ ಯಾವುದೇ ಪಟಾಕಿಗಳನ್ನು ಮಾರಾಟ ಮಾಡದಂತೆ ತಿಳಿಸಲಾಗಿದ್ದು, ಸಾರ್ವಜನಿಕರು ಹಸಿರು ಪಟಾಕಿ ಬಳಸುವ ಮೂಲಕ ಪರಿಸರ ಸ್ನೇಹಿ ಹಬ್ಬವನ್ನು ಆಚರಿಸುವಂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande