ಹಾಸನಾಂಬ ದೇವಿ ಭಕ್ತರ ನಿಯಂತ್ರಣಕ್ಕೆ ಡಿಸಿಗೆ ಪೋಲಿಸ್ ಇಲಾಖೆ ಪತ್ರ
ಹಾಸನ, 19 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಹಾಸನಾಂಬ ದೇವಿ ದರ್ಶನಕ್ಕೆ ಭಕ್ತರ ಆಗಮನ ಮುಂದುವರಿದಿದೆ. ನಿರೀಕ್ಷೆಗೂ ಮೀರಿ ಸಾವಿರಾರು ಭಕ್ತರು ದರ್ಶನಕ್ಕಾಗಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಭಕ್ತರ ಆಗಮನಕ್ಕೆ ಕ್ರಮ ಕೈಗೊಳ್ಳುವಂತೆ ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತ್ ಅವರು ಜ
Hasanambe


ಹಾಸನ, 19 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಹಾಸನಾಂಬ ದೇವಿ ದರ್ಶನಕ್ಕೆ ಭಕ್ತರ ಆಗಮನ ಮುಂದುವರಿದಿದೆ. ನಿರೀಕ್ಷೆಗೂ ಮೀರಿ ಸಾವಿರಾರು ಭಕ್ತರು ದರ್ಶನಕ್ಕಾಗಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಭಕ್ತರ ಆಗಮನಕ್ಕೆ ಕ್ರಮ ಕೈಗೊಳ್ಳುವಂತೆ ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತ್ ಅವರು ಜಿಲ್ಲಾಧಿಕಾರಿ ಲತಾ ಕುಮಾರಿಯವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ರಾಜ್ಯ ಹಾಗೂ ಹೊರರಾಜ್ಯಗಳಿಂದ ಆಗಮಿಸುತ್ತಿರುವ ಭಕ್ತರ ಸಂಖ್ಯೆಯು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ದೇವಸ್ಥಾನದ ಆವರಣದಲ್ಲಿ ಹಾಗೂ ರಸ್ತೆಯವರೆಗೆ ಭಕ್ತರ ಉದ್ದ ಸಾಲು ಕಂಡು ಬರುತ್ತಿದೆ. ದರ್ಶನಕ್ಕೆ ವ್ಯವಸ್ಥೆ ಮಾಡಿರುವ ಸ್ಥಳಾವಕಾಶ ಅಲ್ಪವಾಗಿರುವುದರಿಂದ ನೂಕುನುಗ್ಗಲು ಸಂಭವಿಸುವ ಆತಂಕ ವ್ಯಕ್ತವಾಗಿದೆ.

ಭಕ್ತರನ್ನು ನಿಯಂತ್ರಿಸಲು ಅಗತ್ಯ ಕ್ರಮ ಕೈಗೊಳ್ಳದಿದ್ದರೆ ಅಹಿತಕರ ಘಟನೆ ಸಂಭವಿಸಿದರೆ ಅದರ ಜವಾಬ್ದಾರಿ ಪೊಲೀಸ್ ಇಲಾಖೆಯಲ್ಲ ಎಂದು ಪೋಲಿಸ್ ವರಿಷ್ಠಾಧಿಕಾರಿ ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande