ರಾಯಚೂರು, 19 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಎಫ್ 4, ಟಿಎಸ್.ಹೆಚ್ ಮತ್ತು ವಿಟಮಿನ್ ಬಿ 12 ಪ್ರಯೋಗಾಲಯ ಪರೀಕ್ಷೆಗಳ ಸೇವೆ ಪಡೆಯಲು ಅರ್ಹ ಸಂಸ್ಥೆಗಳಿ0ದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ವೆಬ್‌ಸೈಟ್ ವಿಳಾಸ: https://kppp.karnataka.gov.in ನಲ್ಲಿ ಅಕ್ಟೋಬರ್ 24ರ ಸಂಜೆ 5.30ಗಂಟೆಯೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದ ಡಿ.ಪಿ.ಎಂ.ಯು ವಿಭಾಗಕ್ಕೆ ಸಂಪರ್ಕ ಮಾಡಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘದ ಸದಸ್ಯ ಕಾರ್ಯದರ್ಶಿಗಳಾದ ಡಾ.ನಂದಿತಾ ಎಂ.ಎನ್ ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್