ಭಾರತ ಮತ್ತು ಆಸ್ಟ್ರೇಲಿಯಾ ಏಕ ದಿನ ಸರಣಿಯ ಮೊದಲ ಪಂದ್ಯ ಆರಂಭ
ಪತ್೯, 19 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಏಕದಿನ ಸರಣಿ ಆರಂಭವಾಗಿದೆ. ಪರ್ತ್‌ನಲ್ಲಿ ನಡೆಯುತ್ತಿರುವ ಈ ಸರಣಿಯ ಮೊದಲ ಪಂದ್ಯದಲ್ಲಿ ಟಾಸ್ ಗೆದ್ದಿರುವ ಆಸ್ಟ್ರೇಲಿಯಾ ತಂಡದ ನಾಯಕ ಮಿಚೆಲ್ ಮಾರ್ಷ್ ಬೌಲಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ಈ ಪಂದ್ಯದಲ್ಲಿ ಭಾರತ ತಂಡ ಮೊ
Odi


ಪತ್೯, 19 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಏಕದಿನ ಸರಣಿ ಆರಂಭವಾಗಿದೆ. ಪರ್ತ್‌ನಲ್ಲಿ ನಡೆಯುತ್ತಿರುವ ಈ ಸರಣಿಯ ಮೊದಲ ಪಂದ್ಯದಲ್ಲಿ ಟಾಸ್ ಗೆದ್ದಿರುವ ಆಸ್ಟ್ರೇಲಿಯಾ ತಂಡದ ನಾಯಕ ಮಿಚೆಲ್ ಮಾರ್ಷ್ ಬೌಲಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ಈ ಪಂದ್ಯದಲ್ಲಿ ಭಾರತ ತಂಡ ಮೊದಲು ಬ್ಯಾಟಿಂಗ್ ಮಾಡಲಿದೆ.

ಇನ್ನು ಈ ಪಂದ್ಯದ ಮೂಲಕ ಭಾರತ ಏಕದಿನ ತಂಡದ ನಾಯಕರಾಗಿ ಶುಭ್ಮನ್‌ ಗಿಲ್ ಪಾದಾರ್ಪಣೆ ಮಾಡಿದ್ದಾರೆ. ಅಲ್ಲದೆ ಇದೇ ಪಂದ್ಯದ ಮೂಲಕ ಭಾರತ ತಂಡದ ದಿಗ್ಗಜರಾದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಮತ್ತೆ ಕಣಕ್ಕಿಳಿಯಲಿದ್ದಾರೆ. ಕಳೆದ 7 ತಿಂಗಳಿಂದ ರೋಹಿತ್-ಕೊಹ್ಲಿ ಭಾರತ ಪರ ಯಾವುದೇ ಪಂದ್ಯವಾಡಿಲ್ಲ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande