ಹಾಂಕಾಂಗ್, 20 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ದುಬೈನಿಂದ ಬಂದ ಎಮಿರೇಟ್ಸ್ ಕಂಪನಿಯ ಸರಕು ವಿಮಾನ ಹಾಂಗ್ ಕಾಂಗ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸೋಮವಾರ ಬೆಳಿಗ್ಗೆ ಪತನಗೊಂಡು ಇಬ್ಬರು ಸಾವನ್ನಪ್ಪಿದ್ದಾರೆ. ವಿಮಾನದಲ್ಲಿದ್ದ ನಾಲ್ವರು ಸಿಬ್ಬಂದಿಯನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ.
ಬೆಳಗಿನ 3:50ರ ಸುಮಾರಿಗೆ ಲ್ಯಾಂಡಿಂಗ್ ವೇಳೆ ವಿಮಾನ ರನ್‌ವೇಯಿಂದ ಜಾರಿದು ನೆಲದ ಸೇವಾ ವಾಹನಕ್ಕೆ ಡಿಕ್ಕಿ ಹೊಡೆದು ಸಮುದ್ರಕ್ಕೆ ಉರುಳಿತು. ಸೇವಾ ವಾಹನದಲ್ಲಿದ್ದ ಇಬ್ಬರು ಸಿಬ್ಬಂದಿ ಮೃತಪಟ್ಟಿದ್ದಾರೆ.
ಅಪಘಾತದ ಬಳಿಕ ಉತ್ತರ ರನ್‌ವೇ ಮುಚ್ಚಲ್ಪಟ್ಟಿದ್ದು, 12 ಸರಕು ವಿಮಾನಗಳನ್ನು ರದ್ದುಗೊಳಿಸಲಾಗಿದೆ. ಪ್ರಯಾಣಿಕರ ವಿಮಾನ ಸಂಚಾರ ಸಾಮಾನ್ಯವಾಗಿದೆ. ಅಪಘಾತದ ಕುರಿತು ತನಿಖೆ ಆರಂಭಿಸಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa