ವಿಜಯಪುರ, 20 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಮೂಳೆ ತಪಾಸಣೆ ಉಚಿತ ಶಿಬಿರ ಅಕ್ಟೋಬರ್ 24 ರಂದು ಶುಕ್ರವಾರ ನಗರದ ಬಿ.ಎಲ್.ಡಿ.ಇ ಆಯುರ್ವೇದ ಕಾಲೇಜಿನ ಆವರಣದಲ್ಲಿರುವ ಬಿ.ಎಲ್.ಡಿ.ಇ ನಗರ ಆರೋಗ್ಯ ಕೇಂದ್ರದಲ್ಲಿ ನಡೆಯಲಿದ್ದು, ಖ್ಯಾತ ಆರ್ತ್ರೋಸ್ಕೋಪಿಕ್ ಶಸ್ತ್ರಚಿಕಿತ್ಸಕ ಡಾ. ಅನೀಲ ಬಿ. ಪಾಟೀಲ ತಪಾಸಣೆ ನಡೆಸಲಿದ್ದಾರೆ.
ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರದ ಸಹಯೋಗದಲ್ಲಿ ಬಿ.ಎಲ್.ಡಿ,ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಮಹಾವಿದ್ಯಾಲಯದ ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರದಲ್ಲಿ ಸಂಯುಕ್ತಾಶ್ರಯದಲ್ಲಿ ಈ ಶಿಬಿರ ನಡೆಯಲಿದೆ. ಮೂಳೆ ಚಿಕಿತ್ಸೆ ವಿಭಾಗದಲ್ಲಿ 27 ವರ್ಷಗಳ ಅನುಭವ ಹೊಂದಿರುವ ಡಾ. ಅನೀಲ ಬಿ. ಪಾಟೀಲ ತಪಾಸಣೆ ನಡೆಸಲಿದ್ದಾರೆ.
ಶುಕ್ರವಾರ ಬೆಳಿಗ್ಗೆ 9 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಈ ಶಿಬಿರ ನಡೆಯಲಿದ್ದು, ಮೂಳೆ-ಸಂಧಿ ನೋವು, ಬೆನ್ನು ನೋವು, ಮೊಣಕಾಲು ಸಮಸ್ಯೆ ಹಾಗೂ ಅರ್ಥರೈಟಿಸ್ ಸೇರಿದಂತೆ ಮೂಳೆ ಸಂಬಂಧಿತ ರೋಗಗಳ ತಪಾಸಣೆ ಮತ್ತು ಸಲಹೆ ಉಚಿತವಾಗಿ ನೀಡಲಾಗುತ್ತದೆ.
ಮೂಳೆ ಸಂಧಿ ನೋವು ಮತ್ತೀತರ ಮೂಳೆ ಸಂಬಂಧಿ ಸಮಸ್ಯೆ ಎದುರಿಸುತ್ತಿರುವವರು ಮತ್ತು ಸಾರ್ವಜನಿಕರು ಈ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಬಿ.ಎಲ್.ಡಿ.ಇ ಆಯುರ್ವೇದ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಅಶೋಕ ಪಾಟೀಲ ಮತ್ತು ಬಿ.ಎಲ್.ಡಿ.ಇ ಹೈಟೆಕ್ ಆಯುರ್ವೇದ ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ಸಂಜಯ ಕಡ್ಲಿಮಟ್ಟಿ ಅವರು ಮಾಧ್ಯಮ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9513397413 ಮತ್ತು 9845517446 ಸಂಪರ್ಕಿಸಬಹುದಾಗಿದೆ.
ಹಿಂದೂಸ್ತಾನ್ ಸಮಾಚಾರ್ / jyothi deshpande