ಹಾಸನ : ದ್ವಿಚಕ್ರ ವಾಹನಕ್ಕೆ ಇನ್ನೊವಾ ಕಾರು ಡಿಕ್ಕಿ ; ಇಬ್ಬರ ಸಾವು
ಹಾಸನ, 20 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಹಾಸನಾಂಬ ದೇವಿಯ ದರ್ಶನ ಪಡೆದು ಬೆಂಗಳೂರಿಗೆವ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಇನ್ನೋವಾ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿದ್ದು, ಓರ್ವ ಯುವತಿ ಗಂಭೀರವಾಗಿ ಗಾಯಗೊಂಡ ಘಟನೆ ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲೂಕಿನ ಕಗ್ಗಲಿಕಾವಲು
ಹಾಸನ : ದ್ವಿಚಕ್ರ ವಾಹನಕ್ಕೆ ಇನ್ನೊವಾ ಕಾರು ಡಿಕ್ಕಿ ; ಇಬ್ಬರ ಸಾವು


ಹಾಸನ, 20 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಹಾಸನಾಂಬ ದೇವಿಯ ದರ್ಶನ ಪಡೆದು ಬೆಂಗಳೂರಿಗೆವ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಇನ್ನೋವಾ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿದ್ದು, ಓರ್ವ ಯುವತಿ ಗಂಭೀರವಾಗಿ ಗಾಯಗೊಂಡ ಘಟನೆ ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲೂಕಿನ ಕಗ್ಗಲಿಕಾವಲು ಬಳಿ ಭಾನುವಾರ ತಡ ರಾತ್ರಿ ನಡೆದಿದೆ.

ಬೆಂಗಳೂರಿನಿಂದ ಹಾಸನಾಂಬೆ ದರ್ಶನಕ್ಕೆ ಒಂದೇ ದ್ವಿಚಕ್ರ ವಾಹನದಲ್ಲಿ ಆಗಮಿಸಿದ್ದ ಬಸವರಾಜು, ಅನುಶ್ರೀ ಹಾಗೂ ಛಾಯಾ ದೇವಿ ದರ್ಶನ ಮುಗಿಸಿ ತೆರಳುತ್ತಿದ್ದ ವೇಳೆ ಚನ್ನರಾಯಪಟ್ಟಣ ಕಡೆಯಿಂದ ಬರುತ್ತಿದ್ದ ಇನ್ನೋವಾ ಕಾರು ವೇಗವಾಗಿ ಬಂದು ಮೊದಲು ಆಕ್ಟಿವಾಗೆ ಡಿಕ್ಕಿ ಹೊಡೆದು ಬಳಿಕ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ರಸ್ತೆ ಬದಿಯ ಅರಣ್ಯಕ್ಕೆ ನುಗ್ಗಿದೆ.

ಕಾರು ಡಿಕ್ಕಿ ಹೊಡೆದ ರಭಸಕ್ಕೆ ದ್ವಿಚಕ್ರ ವಾಹನದಲ್ಲಿದ್ದ ಬಸವರಾಜು ಹಾಗೂ ಅನುಶ್ರೀ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಮತ್ತೋರ್ವ ಯುವತಿ ಛಾಯಾ ಸ್ಥಿತಿ ಚಿಂತಾಜನಕವಾಗಿದ್ದು, ಚನ್ನರಾಯಪಟ್ಟಣ ತಾಲೂಕು ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಸ್ಥಳಕ್ಕೆ ಚನ್ನರಾಯಪಟ್ಟಣ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande