ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವ : ವಿಜಯೇಂದ್ರ
ಬೆಂಗಳೂರು, 21 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿರುವುದಕ್ಕೆ ಮುಖ್ಯಮಂತ್ರಿ ಆರ್ಥಿಕ ಸಲಹೆಗಾರರ ಹೇಳಿಕೆ ಸಾಕ್ಷಿಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಅವರು ಬಿಡುಗಡೆ ಮಾಡಿರುವ ಹೇಳಿಕೆ
ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವ : ವಿಜಯೇಂದ್ರ


ಬೆಂಗಳೂರು, 21 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿರುವುದಕ್ಕೆ ಮುಖ್ಯಮಂತ್ರಿ ಆರ್ಥಿಕ ಸಲಹೆಗಾರರ ಹೇಳಿಕೆ ಸಾಕ್ಷಿಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಅವರು ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ, ಸರ್ಕಾರವನ್ನು ಭ್ರಷ್ಟಾಚಾರ ಎಷ್ಟು ಆಳವಾಗಿ ತೂರಿಕೊಂಡಿದೆ ಎಂಬುದನ್ನು ನೋಡಲು ಕರ್ನಾಟಕಕ್ಕೆ ಇನ್ನೇನು ಪುರಾವೆ ಬೇಕು?” ಎಂದು ಪ್ರಶ್ನಿಸಿದ್ದಾರೆ.

ಮುಖ್ಯಮಂತ್ರಿಯವರ ಸ್ವಂತ ಆರ್ಥಿಕ ಸಲಹೆಗಾರರೇ ರಾಜ್ಯದ ನೈಸರ್ಗಿಕ ಸಂಪತ್ತು ಲೂಟಿ ಮಾಡಲಾಗುತ್ತಿದೆ ಹಾಗೂ ಪ್ರತಿ ವರ್ಷ ಜನರಿಂದ ₹400 ಕೋಟಿಗೂ ಹೆಚ್ಚು ಹಣ ದೋಚಲಾಗುತ್ತಿದೆ ಎಂದು ಒಪ್ಪಿಕೊಂಡಿರುವುದನ್ನು ಉಲ್ಲೇಖಿಸಿ, ವಿಜಯೇಂದ್ರ ಅವರು ಇದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಡಳಿತದಲ್ಲಿನ ಭ್ರಷ್ಟಾಚಾರವನ್ನು ಬಹಿರಂಗಪಡಿಸುತ್ತದೆ ಎಂದು ಟೀಕಿಸಿದ್ದಾರೆ.

“ಮರಳು ಮಾಫಿಯಾ ಬಹಿರಂಗವಾಗಿಯೇ ಬೆಳೆಯುತ್ತಿದೆ, ಅಧಿಕಾರಿಗಳು ಸಚಿವರ ರಕ್ಷಣೆಯಲ್ಲಿ ಲಂಚ ಪಡೆಯುತ್ತಿದ್ದಾರೆ. ಅಕ್ರಮ ಗಣಿಗಾರಿಕೆ, ನೈಸರ್ಗಿಕ ಸಂಪನ್ಮೂಲಗಳ ಲೂಟಿ ಮತ್ತು ಲಂಚ ಪ್ರಕರಣಗಳಿಂದ ವ್ಯವಸ್ಥೆಯ ಪ್ರತಿಯೊಂದು ಭಾಗವೂ ಕಲುಷಿತವಾಗಿದೆ. ಅಭಿವೃದ್ಧಿ ಹಿಂದೆ ಸರಿದಿದೆ ಮತ್ತು ಅಧಿಕಾರದಲ್ಲಿರುವವರು ಅವ್ಯವಸ್ಥೆಯ ಭಾಗವಾಗಿದ್ದಾರೆ” ಎಂದು ವಿಜಯೇಂದ್ರ ಸರಕಾರದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande